ಶಿವಮೊಗ್ಗ: ರಾಜಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
ಶಿವಮೊಗ್ಗ: ನಗರದ ರಾಜ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.
ನಗರದ ಆರ್.ಎಂ.ಎಲ್ ನಗರದ ಚಾನಲ್ ನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಮೇಲೆತ್ತಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಕಾಲುವೆಯಲ್ಲಿ ಮಗುವಿನ ಮೃತದೇಹ ಸಿಕ್ಕಿಬಿದ್ದಿರುವುದನ್ನು ಮಹಿಳೆಯೊಬ್ಬರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.
ರಾಜಕಾಲುವೆಯಲ್ಲಿರುವ ಮೃತದೇಹವನ್ನು ಮೇಲೆತ್ತಲಾಗಿದ್ದು, ಒಂದು ತಿಂಗಳ ಮಗು ಎಂದು ಅಂದಾಜಿಸಲಾಗಿದೆ.
ಈ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ
Next Story