Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧಾರ್ಮಿಕ ಸಾಮರಸ್ಯಕ್ಕೆ ಧ್ವನಿವರ್ಧಕ...

ಧಾರ್ಮಿಕ ಸಾಮರಸ್ಯಕ್ಕೆ ಧ್ವನಿವರ್ಧಕ ಧಕ್ಕೆಯಾಗದಿರಲಿ: ಉಲಮಾ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ20 May 2022 10:29 PM IST
share

ಮಂಗಳೂರು: ಆರಾಧನಾಲಯಗಳ ಪ್ರಾರ್ಥನೆಗಳಲ್ಲಿ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ವನ್ನು ಬಳಸುವ ವಿಚಾರವು ವಿವಿಧ ಸಮುದಾಯಗಳ ನಡುವಿನ ಶಾಂತಿ ಸಾಮರಸ್ಯವನ್ನು ಕೆಡಹುವ ಸ್ಥಿತಿಗೆ ತಲುಪದಂತೆ ಜಾಗ್ರತೆ ವಹಿಸಬೇಕೆಂದು ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯ ಸಮಿತಿ ಸರ್ವ ಧರ್ಮೀಯರಲ್ಲಿ ವಿನಂತಿಸಿದೆ.

ಮಂಗಳೂರಿನಲ್ಲಿ ಸೇರಿದ ಸಮಿತಿ ಸಭೆಯಲ್ಲಿ ಅಝಾನ್‌ಗಾಗಿ ಧ್ವನಿವರ್ಧಕವನ್ನು ಬಳಸುವ ಬಗ್ಗೆ ಹುಟ್ಟು ಹಾಕಲಾದ ವಿವಾದಗಳ ಕುರಿತಂತೆ ಗಂಭೀರ ಚರ್ಚೆ ನಡೆಸಲಾಯಿತು.

ಧ್ವನಿವರ್ಧಕದ ಬಳಕೆ ಎಲ್ಲ ಧರ್ಮೀಯರ ಆರಾಧನಾಲಯಗಳಲ್ಲಿ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ವ್ಯಾಪಕವಾಗಿದ್ದು, ಬಹುತೇಕ ಎಲ್ಲ ಸಮುದಾಯಗಳು ಇಂತಹ ವಿಷಯಗಳ ಅಗತ್ಯಗಳನ್ನು ಮನಗಂಡು ಪರಸ್ಪರ ಅರ್ಥೈಸಿಕೊಂಡು ಹೊಂದಾಣಿಕೆಯೊಂದಿಗೆ ಮುಂದುವರೆಯುತ್ತಿವೆ. ಈ ಮೂಲಕ ಸಾರ್ವಜನಿಕರು ತೊಂದರೆಗೀಡಾಗುವ ಸನ್ನಿವೇಶಗಳು ಸೃಷ್ಟಿಯಾಗದಂತೆ ನ್ಯಾಯಾಲಯಗಳು ಬೇಕಾದ ಮಾರ್ಗಸೂಚಿಗಳನ್ನು ನೀಡಿವೆ. ಇವುಗಳನ್ನೆಲ್ಲ ಗಮನದಲ್ಲಿಟ್ಟು, ಆರಾಧನಾಲಯಗಳ ಆಸುಪಾಸಿನಲ್ಲಿರುವ ಸಾರ್ವಜನಿಕರ ಹಿತಾಸಕ್ತಿಯನ್ನು ಪರಿಗಣಿಸಿಕೊಂಡು ಧ್ವನಿವರ್ಧಕವನ್ನು ಬಳಸಬೇಕೆಂದು ಕರ್ನಾಟಕದ ಸುನ್ನೀ ವಿದ್ವಾಂಸರ ಒಕ್ಕೂಟ ತಿಳಿಸಿದೆ.

ಅಝಾನ್ ಎನ್ನುವುದು ನಮಾಝ್‌ನ ಸಮಯಾರಂಭದಲ್ಲಿ ನೀಡುವ ಕರೆಯಾಗಿದ್ದು, ಪ್ರಭಾತದ ಆರಂಭದ ಸುಬುಹಿ ಅಝಾನನ್ನು ಆರು ಗಂಟೆಗೆ ಕೊಡಬೇಕೆಂಬ ವಾದವನ್ನು ಪುರಸ್ಕರಿಸಲು ಸಾಧ್ಯವಲ್ಲವೆಂದು ಮುಶಾವರಾ ಸಭೆಯು ಅಭಿಪ್ರಾಯಪಟ್ಟಿತು.

ಸಭೆಯಲ್ಲಿ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮೌಲಾನಾ ಹುಸೈನ್ ಸಅದಿ ಕೆಸಿರೋಡ್ ಸ್ವಾಗತಿಸಿದರು. ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X