ದ್ವೇಷ ಭಾಷಣ ಪ್ರಕರಣ: ಕೇರಳದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ
Photo: Facebook
ಕೊಚ್ಚಿ: ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿಂದೆ ಪಾಲಾರಿವಟ್ಟಂ ಪೊಲೀಸರು ಐಪಿಸಿ 153 ಮತ್ತು 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಅವರು ಮೇ 8 ರಂದು ಎರ್ನಾಕುಲಂನ ವೆನ್ನಾಲದ ಮಹಾದೇವ ದೇವಸ್ಥಾನದಲ್ಲಿ ನಡೆದ ಸಪ್ತಾಹ ಯಜ್ಞ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದರು. ಮೊದಲು ಈ ಪ್ರಕರಣವನ್ನು ದಾಖಲಿಸಲಾಗಿತ್ತು. ಬಳಿಕ, ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಮತ್ತೊಂದು ಪ್ರಕರಣದಲ್ಲಿ ತಿರುವನಂತಪುರಂ ಕೋಟೆ ಪೊಲೀಸರು ಅವರನ್ನು ಬಂಧಿಸಿದ್ದರು.
Next Story