Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮೇ 28ಕ್ಕೆ ವೈಭವದ ಅಮೃತ ಭಾರತಿಗೆ...

ಉಡುಪಿ: ಮೇ 28ಕ್ಕೆ ವೈಭವದ ಅಮೃತ ಭಾರತಿಗೆ ಕನ್ನಡದ ಆರತಿ

ವಾರ್ತಾಭಾರತಿವಾರ್ತಾಭಾರತಿ21 May 2022 8:20 PM IST
share
ಉಡುಪಿ: ಮೇ 28ಕ್ಕೆ ವೈಭವದ ಅಮೃತ ಭಾರತಿಗೆ ಕನ್ನಡದ ಆರತಿ

ಉಡುಪಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಮೇ 28ರಂದು ನಡೆಯುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವನ್ನು ಅತ್ಯಂತ ವೈಭವದಿಂದ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ರಘುಪತಿ ಭಟ್ ಸೂಚಿಸಿದ್ದಾರೆ. 

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಅವಧಿಯಲ್ಲಿ, ರಾಷ್ಟ್ರಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲಕು ಹಾಕುತ್ತಾ, ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನೇ ತಾವು ತೊಡಗಿಸಿಕೊಂಡು ಜೀವತ್ಯಾಗ ಮಾಡಿದ ಹೋರಾಟಗಾರರ ಜೀವನಗಾಥೆ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಯನ್ನು ಇಂದಿನ ಯುವ ಜನಾಂಗಕ್ಕೆ ಮತ್ತು ಸಾರ್ವಜನಿಕರಿಗೆ ಹಾಗೂ ರಾಷ್ಟ್ರಕ್ಕೆ ತಿಳಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ವೈಭವಯುತವಾಗಿ ಮತ್ತು ಅರ್ಥ ಪೂರ್ಣವಾಗಿ ಅಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾತಂಡಗಳಿಂದ ಆಕರ್ಷಕ ಮೆರವಣಿಗೆ ಏರ್ಪಡಿಸುವಂತೆ ಸೂಚಿಸಿದ ಅವರು, ವಿದ್ಯಾರ್ಥಿಗಳು ಹಾಗೂ ಸ್ತ್ರೀಶಕ್ತಿ ಸಂಘಗಳ ಕಾರ್ಯಕರ್ತರಿಂದ ಮೆರವಣಿಗೆ ಸೇರಿದಂತೆ, ಕಾರ್ಯಕ್ರಮ ದಲ್ಲಿ ಸುಮಾರು ೫೦೦೦ಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡುವಂತೆ ಹಾಗೂ ಮಳೆಗಾಲದ ಕಾರಣ ಕಾರ್ಯಕ್ರಮ ನಡೆಯುವ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸೂಕ್ತ ಚಪ್ಪರ, ಶಾಮಿಯಾನ ಮತ್ತು ವೇದಿಕೆ ನಿರ್ಮಿಸುವಂತೆ ಸೂಚನೆ ನೀಡಿದರು.

ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಒದಗಿಸುವಂತೆ  ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲೆಯ ಎಲ್ಲಾ ಗ್ರಾಪಂ, ನಗರಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೂ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಕುರಿತಂತೆ ಅಜ್ಜರಕಾಡು ಗಾಂಧೀ ಪಾರ್ಕ್ ನಲ್ಲಿ ಶಿಲಾಫಲಕ ಅಳವಡಿಸಲು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕಿರುಚಿತ್ರ ಪ್ರದರ್ಶನಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮ ಮಾದರಿ ಕಾರ್ಯಕ್ರಮವಾಗುವ ರೀತಿಯಲ್ಲಿ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ತಮಗೆ ನೀಡಿರುವ ಜವಾಬ್ದಾರಿಗಳನ್ನು ಯಾವುದೇ ಲೋಪಕ್ಕೆ ಆಸ್ಪದ ನೀಡದಂತೆ ನಿರ್ವಹಿಸ ಬೇಕು, ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪದೇ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಸಭೆಯಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X