Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಲ್ಲೂರು ವ್ಯಾಪ್ತಿಯಲ್ಲಿ 120ಕ್ಕೂ ಅಧಿಕ...

ಕೊಲ್ಲೂರು ವ್ಯಾಪ್ತಿಯಲ್ಲಿ 120ಕ್ಕೂ ಅಧಿಕ ಡೆಂಗ್ಯೂ ಪ್ರಕರಣ

13 ತಂಡಗಳ ರಚನೆ

ವಾರ್ತಾಭಾರತಿವಾರ್ತಾಭಾರತಿ22 May 2022 6:23 PM IST
share
ಕೊಲ್ಲೂರು ವ್ಯಾಪ್ತಿಯಲ್ಲಿ 120ಕ್ಕೂ ಅಧಿಕ ಡೆಂಗ್ಯೂ ಪ್ರಕರಣ

ಉಡುಪಿ : ಬೈಂದೂರು ತಾಲೂಕು ವ್ಯಾಪ್ತಿಯ ಕೊಲ್ಲೂರು, ಮುದೂರು, ಜಡ್ಕಲ್ ಪ್ರದೇಶಗಳ ಸಾರ್ವಜನಿಕರಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಮರೋ ಪಾದಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳ ಸಂಖ್ಯೆಯನ್ನು ಶೂನ್ಯ ಕ್ಕಿಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ವೈದ್ಯರು, ಶುಶ್ರೂಷಕಿಯರು, ಆಶಾ ಕಾರ್ಯ ಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆಯ ಅವಿರತವಾಗಿ ಶ್ರಮಿಸುತ್ತಿದ್ದಾರೆ.

೨೦೨೨ರ ಮಾರ್ಚ್‌ನಿಂದ ಈ ಭಾಗದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಅಧಿಕ ವಾಗುತ್ತಿದ್ದು, ಜನವರಿಯಿಂದ ಈವರೆಗೂ ಜಿಲ್ಲೆಯಲ್ಲಿ ೧೬೦ಕ್ಕೂ ಹೆಚ್ಚು ಪ್ರಕರಣ ಗಳು ವರದಿಯಾಗಿದೆ. ಅದರಲ್ಲಿ ೧೨೦ಕ್ಕೂ ಹೆಚ್ಚು ಈ ವ್ಯಾಪ್ತಿಯಲ್ಲಿಯೇ ಕಂಡು ಬಂದಿದೆ. ಈಗಾಗಲೇ ಡೆಂಗ್ಯೂ ಪೀಡಿತರಿಗಾಗಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ೬೦ ಹಾಸಿಗೆಗಳ ವಿಸೇಷ ವಾರ್ಡ್ ಸಿದ್ದಪಡಿಸಿದ್ದು, ಇವುಗಳಲ್ಲಿ ೨೫ ಪುರುಷ, ೨೫ ಮಹಿಳೆ ಮತ್ತು ೧೦ ಬೆಡ್‌ಗಳನ್ನು ಮಕ್ಕಳಿಗೆ ಮೀಸಲಿಡ ಲಾಗಿದೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಸೊಳ್ಳೆ ಉತ್ಪತ್ತಿ ತಾಣಗಳ ನಾಶ

ಹೆಚ್ಚಿನ ಪ್ರಕರಣಗಳು ವರಿಯಾಗುತ್ತಿರುವ ಮುದೂರು ಮತ್ತು ಜಡ್ಕಲ್‌ನಲ್ಲಿ  ನಿರಂತರ ನಿಗಾವಹಿಸಲು ಆರೋಗ್ಯಾ ಧಿಕಾರಿಗಳನ್ನು ಒಳಗೊಂಡ ೧೩ ತಂಡ ಗಳನ್ನು ರಚಿಸಿದ್ದು, ಈ ತಂಡದ ಸದಸ್ಯರು ಪ್ರತಿದಿನ ಮನೆಮನೆಗೆ ತೆರಳಿ ಡೆಂಗ್ಯೂ ಕುರಿತು ಅರಿವು ಮೂಡಿಸುವುದರ ಜೊತೆಗೆ ಮನೆಯ ಸುತ್ತಮುತ್ತಲಿನ ಸ್ವಚ್ಛತೆ ಬಗ್ಗೆ ಪರಿಶೀಲಿಸಿ, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡಲಾಗುತ್ತಿದ್ದಾರೆ.

ಈ ಎರಡೂ ಗ್ರಾಮಗಳ ಮನೆಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಉಚಿತವಾಗಿ ಸೊಳ್ಳೆ ಪರದೆಗಳನ್ನು ಸರಬರಾಜು ಮಾಡಲಾಗಿದ್ದು, ಎಲ್ಲಾ ಮನೆಗಳಿಗೆ ತಲಾ ೨ ಬಾಟೆಲ್ ಡಿಎಂಪಿ ತೈಲವನ್ನು ವಿತರಿಸಲಾಗಿದೆ. ಡೆಂಗ್ಯೂ ಪೀಡಿತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ತುರ್ತು ಅಗತ್ಯಕ್ಕಾಗಿ ಎರಡು ಅಂಬು ಲೈನ್ಸ್‌ಗಳನ್ನು ನಿಯೋಜಿಸಲಾಗಿದ್ದು, ಗ್ರಾಮದಲ್ಲಿ ಪ್ರತಿದಿನ ಪಾಗಿಂಗ್ ಮಾಡ ಲಾಗುತ್ತಿದೆ.

ರಬ್ಬರ್, ಅನಾನಸು ಕಾರಣ

ಈ ಪ್ರದೇಶದಲ್ಲಿ ರಬ್ಬರು ಮತ್ತು ಅನಾನಸು ಬೆಳೆ ಅಧಿಕವಾಗಿದ್ದು, ರಬ್ಬರ್ ಪ್ಲಾಂಟೇಷನ್‌ಗಳಲ್ಲಿ ರಬ್ಬರ್ ಹಾಲಿನ ಸಂಗ್ರಹಕ್ಕೆ ಇಟ್ಟಿರುವ ಗೆರಟೆಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಸೊಳ್ಳೆಯ ಲಾರ್ವಾ ಹುಟ್ಟುತ್ತುದ್ದು, ಇದು ಡೆಂಗ್ಯೂ ಸೊಳ್ಳೆ ಏಡಿಸ್‌ನ ಉಗಮಕ್ಕೆ ಕಾರಣ ಎಂದು ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿದೆ.

ಇದರೊಂದಿಗೆ ಅನಾನಸ್ ಗಿಡದ ಎಲೆಗಳ ನಡುವೆ ನಿಂತ ನೀರಿನಲ್ಲೂ ಮತ್ತು ಅಡಿಕೆ ತೋಟದ ಅಡಿಕೆ ಹಾಳೆಗಳಲ್ಲೂ ಡೆಂಗ್ಯೂ ಹರಡುವ ಸೊಳ್ಳೆಗಳು ಉಗಮ ವಾಗುತ್ತಿದ್ದು, ಈ ಬಗ್ಗೆ ತೋಟಗಳ ಮಾಲೀಕರಿಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.  

ಗ್ರಾಮಗಳ ವ್ಯಾಪ್ತಿಯಲ್ಲಿ ಬೀದಿ ನಾಟಕ, ಸಾಕ್ಷ್ಯಚಿತ್ರ ಪ್ರದರ್ಶನಗಳ ಮೂಲಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ನಿಯಂತ್ರಣ ಕುರಿತು ಮಾಹಿತಿ ನೀಡಲಾಗಿದೆ. ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಮತ್ತು ಚರ್ಚ್‌ಗಳಲ್ಲಿನ ವಾರದ ಪ್ರಾರ್ಥನೆಯಲ್ಲೂ ಅರಿವು ಮೂಡಿಸಲಾಗಿದೆ ಎಂದು ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ ನಿರ್ದೇಶನ

ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಜಿಪಂ ಸಿಇಓ, ಸಂಬಂಧಪಟ್ಟ ಗ್ರಾಪಂ ಗಳ ಅಧ್ಯಕ್ಷರು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರತಿದಿನ ಇಲ್ಲಿನ ಪರಿಸ್ಥಿತಿ ಬಗ್ಗೆ ವರದಿ ಪಡೆಯುತ್ತಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ಡೆಂಗ್ಯೂ ನಿಯಂತ್ರಣಕ್ಕೆ ನೀಡಿರುವ ಎಲ್ಲಾ ರೀತಿಯ  ನೆರವು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಗಿದ್ದು, ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತ ನೀಡಿರುವ ಎಲ್ಲ್ಲ ನಿರ್ದೇಶನಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಈ ಪ್ರದೇಶದಿಂದ ಡೆಂಗ್ಯೂವನ್ನು ನಿರ್ಮೂಲನೆ ಮಾಡಲು ಆರೋಗ್ಯ ಇಲಾಖೆಯು ಕೂಡ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಕರಣಗಳು ಹೆಚ್ಚದಂತೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಅಗತ್ಯವಿರುವ ಔಷಧಗಳ ದಾಸ್ತಾನು

ಪ್ರಸ್ತುತ ಎಲ್ಲಡೆ ಮಳೆ ಅಧಿಕವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ತಮ್ಮ ಆರೋಗ್ಯದ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ಜ್ವರ ಬಂದರೂ ನಿರ್ಲಕ್ಷ ವಹಿಸದೆ, ಮುದೂರು ಉಪ ಆರೋಗ್ಯ ಕೇಂದ್ರ, ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಫೀವರ್ ಕ್ಲೀನಿಕ್‌ನಲ್ಲಿ ಪರೀಕ್ಷಿಸಿ ಕೊಳ್ಳಬೇಕು.

ಡೆಂಗ್ಯೂ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಔಷಧಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು, ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಯಿಲ್ಲ. ಸಾರ್ವಜನಿಕರು ಮನೆಯಿಂದ ಹೊರ ಹೋಗುವಾಗ ಸೊಳ್ಳೆ ಕಡಿತದಿಂದ ಪಾರಾಗಲು ಸಂಪೂರ್ಣ ಮೈ ಮುಚ್ಚುವಂತಹ ಬಟ್ಟೆಗಳನ್ನು ಧರಿಸಬೇಕು. ಮನೆಯಲ್ಲಿ ಸೊಳ್ಳೆ ಪರದೆ ಗಳನ್ನು ಬಳಸಬೇಕು. ಮನೆಯ ಸಮೀಪದಲ್ಲಿ ತ್ಯಾಜ್ಯ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದರ ಸೊಳ್ಳೆಗಳ ಬೆಳವಣಿಗೆಗೆ ಅವಕಾಶ ನೀಡಬಾರದು. ಈ ಮೂಲಕ ಡೆಂಗ್ಯೂ ನಿರ್ಮೂಲನೆಗೆ ಆರೋಗ್ಯ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X