Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಮತ್ತೆ ಬಿರುಸು ಪಡೆದ...

ದ.ಕ.ಜಿಲ್ಲೆಯಲ್ಲಿ ಮತ್ತೆ ಬಿರುಸು ಪಡೆದ ಮಳೆ

ವಾರ್ತಾಭಾರತಿವಾರ್ತಾಭಾರತಿ22 May 2022 10:24 PM IST
share
ದ.ಕ.ಜಿಲ್ಲೆಯಲ್ಲಿ ಮತ್ತೆ ಬಿರುಸು ಪಡೆದ ಮಳೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಮಳೆ ಮತ್ತೆ ಬಿರುಸು ಪಡೆದು ಕೊಂಡಿದೆ. ಮೋಡ ಕವಿದ ವಾತಾವರಣದೊಂದಿಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ಮುಂಜಾನೆ ಮೋಡದ ವಾತಾವರಣವಿತ್ತು, ಬಳಿಕಕೆಲಕಾಲ ಬಿಸಿಲು ಕಾಣಿಸಿತು. ನಂತರ ದಟ್ಟ ಮೋಡ ಕವಿಯಲು ಆರಂಭವಾಗಿ ಮಧ್ಯಾಹ್ನದ ಬಳಿಕ ಬಿರುಸಿನ ಮಳೆಯಾಗಿದೆ.

ಮಧ್ಯಾಹ್ನ ಸುಮಾರು ೧ರಿಂದ ೩ ಗಂಟೆಯ ಮಧ್ಯೆ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ರಸ್ತೆಗಳಲ್ಲಿ ತೋಡಿನಂತೆ ನೀರು ಹರಿದಿದೆ. ರಾಜಕಾಲುವೆಗಳ್ಲಲಿಯೂ ಭಾರೀ ಪ್ರಮಾಣದಲ್ಲಿ ನೀರು ಹರಿದಿದೆ. ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಮತ್ತಿತರ ಕಡೆಗಳಲ್ಲಿ  ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ರಸ್ತೆಯಲ್ಲೇ ನೀರು ಸಂಗ್ರಹಗೊಂಡಿವೆ. ಕೆಲವು ಅಂಗಡಿಯೊಳಗೂ ನೀರು ನುಗ್ಗಿವೆ. ನಗರದ ಅತ್ತಾವರ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತು  ಆಸ್ಪತ್ರೆಗೆ ಬರುವವರು, ಹೋಗುವವರು ಮತ್ತು ಆ್ಯಂಬುಲೆನ್ಸ್ ಸಹಿತ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ.

ಫೋರ್ಥ್ ಮೈಲ್ ರಾಜಕಾಲುವೆ ಕಾಮಗಾರಿ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಕೊಟ್ಟಾರ ಚೌಕಿ ಬಳಿಯೂ ನೀರು ತುಂಬಿತ್ತು. ಮಾಹಾಕಾಳಿ ಪಡ್ಪುವಿನಿಂದ ಜಪ್ಪಿನಮೊಗರು ಕಡೆಗೆ ಸಾಗುವ ರಸ್ತೆಯಲ್ಲಿ ಸುಮಾರು ಒಂದುವರೆ ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿತ್ತು. ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಅತ್ಯಧಿಕ ೭೬.೫ ಮಿ.ಮೀ. ಮಳೆಯಾಗಿದೆ. ಇಡ್ಕಿದು ೬೩,  ಕೆದಿಲ ೫೨, ಕೇಪು ೫೦, ಉಳಿ ೪೮ ಮಿ.ಮೀ. ಸಹಿತ ಸುಳ್ಯದ ಬಾಳಿಲ, ಪುತ್ತೂರಿನ ಮುಡ್ನೂರು, ನೆಕ್ಕಿಲಾಡಿ, ಬಲ್ನಾಡು, ಉಳ್ಳಾಲದ ತಲಪಾಡಿ, ಕೊಣಾಜೆ, ಪಾವೂರು, ದೇರಳಕಟ್ಟೆ ಮತ್ತಿತರ ಭಾರೀ ಮಳೆಯಾಗಿದೆ.

ಸೋಮವಾರಕ್ಕೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೊಷಿಸಲಾಗಿದ್ದು, ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರಲ್ಲಿ ಗಂಟೆಗೆ  ೪೦ರಿಂದ ೫೦ ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರಿಕೆ ನಡೆಸದಂತೆ ಸೂಚನೆ ನಿಡಲಾಗಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ ೨೭.೪ ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ೨೩.೬ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X