ಗ್ರಾಪಂ, ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ, ಉಪ ಚುನಾವಣೆ ಫಲಿತಾಂಶ ಪ್ರಕಟ

ಬೆಂಗಳೂರು, ಮೇ 22: ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ/ಉಪ ಚುನಾವಣೆಯ ಮತ ಏಣಿಕೆ ಕಾರ್ಯವು 2022ರ ಮೇ 22ರಂದು ಮುಕ್ತಾಯಗೊಂಡಿದ್ದು, ಚುನಾವಣೆಯ ಫಲಿತಾಂಶವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ.
ತುಮಕೂರು, ದಾವಣಗೆರೆ, ಬೀದರ್, ಹಾಸನ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿದ್ದು, ಐಎನ್‍ಸಿ ಪಕ್ಷದ 3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ-4, ಜೆಡಿಎಸ್ ಪಕ್ಷದ ಒಬ್ಬರು ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.
ಬೆಂಗಳೂರು ಜಿಲ್ಲೆ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆದಿದ್ದು, ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮತದಾನದ ನಂತರ 30 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಟ್ಟು 207 ಸ್ಥಾನಗಳ ಫೈಕಿ ಅವಿರೋಧವಾಗಿ 63 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಮತದಾನದ ಬಳಿಕ 107 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಫಲಿತಾಂಶದ ಅಂಕಿ ಅಂಶಗಳನ್ನು ಆಯೋಗದ ಅಧಿಕೃತ ಅಂತರ್ಜಾಲ ತಾಣ www.karsec.gov.in ನಲ್ಲಿ ಪ್ರಕಟಿಸಲಾಗಿದೆ.







