Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಮೊಗೇರ ಹೆಸರಿನಲ್ಲಿ ನಕಲಿ...

ಮಂಗಳೂರು | ಮೊಗೇರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: ಬೀದಿಗಿಳಿದ ದಲಿತರು

ಮೊಳಗಿದ ಜೈ ಭೀಮ್ ಘೋಷಣೆ: ರಾರಾಜಿಸಿದ ನೀಲಿ ಪತಾಕೆಗಳು

ವಾರ್ತಾಭಾರತಿವಾರ್ತಾಭಾರತಿ23 May 2022 3:27 PM IST
share
ಮಂಗಳೂರು | ಮೊಗೇರ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: ಬೀದಿಗಿಳಿದ ದಲಿತರು

ಮಂಗಳೂರು, ಮೇ 23: ಪರಿಶಿಷ್ಟ ಜಾತಿಗೆ ಸೇರಿದ ಮೊಗೇರರಿಗೆ ನೀಡಲಾಗುವ ಜಾತಿ ಪ್ರಮಾಣ ಪತ್ರವನ್ನು ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಪಡೆದುಕೊಂಡು ಮೀಸಲಾತಿ ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ದಲಿತರು ಬೀದಿಗಿಳಿದು ಪ್ರತಿಭಟಿಸಿದರು.

ರ್ಯಾಲಿ, ಜನಾಗ್ರಹ ಸಭೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ದಲಿತರು ಕೈಯಲ್ಲಿ ನೀಲಿ ಪತಾಕೆಯೊಂದಿಗೆ 'ಜೈ ಭೀಮ್' ಘೋಷಣೆಗಳನ್ನು ಕೂಗಿದರು.

ನಗರದ ಬಲ್ಮಠದ ಶಾಂತಿ ನಿಲಯ ಸಮೀಪದ ಮೈದಾನದಿಂದ ಹೊರಟ ಮೆರವಣಿಗೆಯು ಕ್ಲಾಕ್ ಟವರ್ ಎದುರು ಸಮಾವೇಶಗೊಂಡಿತು. ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಪರಿಶಿಷ್ಟ ಜಾತಿ ಅಧ್ಯಯನ ಸಮಿತಿಯ ಸಂಚಾಲಕ ಸುಭಾಷ್ ಕಾನಡೆ, ಮೂಲತ: ಮೊಲ ಬೇಟೆಯಾಡುವ ಸಮುದಾಯವಾದ ಪರಿಶಿಷ್ಟ ಜಾತಿಗೆ ಸೇರಿದ ಮೊಗೇರರ ಪದನಾಮ ಬಳಸಿ 1977ರಿಂದ 2010ರವರೆಗೆ ಮೀನುಗಾರ ಸಮುದಾಯದವರು ಉತ್ತರ ಕನ್ನಡ ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಮೀಸಲಾತಿ ಸೌಲಭ್ಯಗಳನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ 2004-05ರಲ್ಲಿ ಅಧಿಕಾರದಲ್ಲಿದದ ಸರಕಾರಕ್ಕೆ ಮನವಿ ಸಲ್ಲಿಸಿದಾಗ ಕುಲಶಾಸ್ತ್ರೀಯ ಅಧ್ಯಯನಕ್ಕೆ ನಿರ್ಣಯಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ತಡೆಗೆ ಕ್ರಮ ವಹಿಸಲಾಗಿತ್ತು. ಆದರೆ ಇಂದಿಗೂ ನಕಲಿ ಜಾತಿ ಪ್ರಮಾಣ ಪತ್ರ ಬಳಸಿಕೊಂಡು ಸೌಲಭ್ಯವನ್ನು ಪಡೆಯುತ್ತಿರುವವರು ಮುಂದುವರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 ಮಂಗಳೂರು ವಿಶ್ವವಿದ್ಯಾನಿಲಯದಲ್ಲೂ ಉನ್ನತ ವ್ಯಾಸಂಗಕ್ಕಾಗಿ ಮೊಗೇರ ಜಾತಿ ಪ್ರಮಾಣವನ್ನು ಇತರ ಸಮುದಾಯದವರು ದುರುಪಯೋಗಪಡಿಸುತ್ತಿರುವ ಸಾಧ್ಯತೆ ಇದ್ದು, ಸಮುದಾಯದವರು ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಪ್ರವರ್ಗ- 1ರಲ್ಲಿರುವ ಮೀನುಗಾರ ಸಮುದಾಯದವರು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಟ ಜಾತಿಯ ಮೊಗೇರರ ಸವಲತ್ತುಗಳನ್ನು ಪಡೆಯುವ ಮೂಲಕ ಸಾಂವಿಧಾನಿಕ ಮೀಸಲಾತಿ ಹಕ್ಕನ್ನು ಕಸಿದು ಅನ್ಯಾಯವೆಸಗಿದ್ದಾರೆ. ಕೇವಲ ಮೊಗೇರ ಮಾತ್ರವಲ್ಲದೆ, ಪರಿಶಿಷ್ಟ ಜಾತಿಯ ಇತರ 101 ಜಾತಿಗಳಿಗೂ ರಾಜಕೀಯ, ಉದ್ಯೋಗ, ಶಿಕ್ಷಣ, ಸಾಮಾಜಿಕ ಸೌಲಭ್ಯದಿಂದ ವಂಚನೆಯಾಗುತ್ತಿದ್ದು, ಈ ಬಗ್ಗೆ ದಲಿತರು ಗಮನ ಹರಿಸಬೇಕಾಗಿದೆ ಎಂದು ದಲಿತ ಮುಖಂಡ ಅಶೋಕ್ ಕೊಂಚಾಡಿ ಹೇಳಿದರು.

ಬಲ್ಮಠದ ಶಾಂತಿ ನಿಲಯದ ಮೈದಾನದ ಹೊರಟ ಸಾವಿರಾರು ಸಂಖ್ಯೆಯ ದಲಿತರ ಮೆರವಣಿಗೆಯನ್ನು ಮೊಗೇರ ಸಂಘದ ಹಿರಿಯ ಮುಖಂಡ ಮೋಹನ್‌ದಾಸ್ ಸುಳ್ಯ ದುಡಿಯನ್ನು ಬಾರಿಸುವ ಮೂಲಕ ಚಾಲನೆ ನೀಡಿದರು.

ನಗರದ ಕ್ಲಾಕ್ ಟವರ್ ಬಳಿ ನಡೆದ ಜನಾಗ್ರಹ ಸಮಾವೇಶಕ್ಕೆ ಮೊಗೇರ ಸಂಘದ ರಾಜ್ಯ ಅಧ್ಯಕ್ಷ ವಿಶ್ವನಾಥ್ ಉಪಸ್ಥಿತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಯೊಂದಿಗೆ ಚಾಲನೆ ನೀಡಲಾಯಿತು.

ಮೊಗೇರ ಸಂಘದ ಗೌರವಾಧ್ಯಕ್ಷ ಸುಂದರ ಮೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಸೀತಾರಾಮ ಕೊಂಚಾಡಿ, ರಘು ಬೆಳ್ಳಿಪಾಡಿ, ರಮೇಶ್ ಕೋಟ್ಯಾನ್, ಜಗದೀಶ್ ಪಾಂಡೇಶ್ವರ್, ಚಂದ್ರ ಕುಮಾರ್, ಪದ್ಮನಾಭ ನರಿಂಗಾನ, ಇನ್ನಿತರರು ಭಾಗವಹಿಸಿದ್ದರು.


ಶಿಕ್ಷಣ, ಸಾಲ ಸೌಲಭ್ಯದಂತೆ, ಮೀಸಲಾತಿ ಕ್ಷೇತ್ರದಿಂದ ಸ್ಪರ್ಧಿಸುವವರಿಗೂ ಸಿಂಧುತ್ವ ಅಗತ್ಯವಾಗಿ ದೊರೆಯಬೇಕು. 1977ರಿಂದ ಮೊಗೇರ ಪದನಾಮದಲ್ಲಿ ಇತರ ಸಮುದಾಯದವರು ಪಡೆದ ನಕಲಿ ಜಾತಿ ಪ್ರಮಾಣ ಪತ್ರ ರದ್ದಾಗಬೇಕು. ಪ್ರಸ್ತುತ ಕಂಪ್ಯೂಟರೀಕೃತ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, 1977ರಿಂದ 2010ರವರೆಗೆ ಕೈಬರಹದ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಅದನ್ನು ಸಾರಾಸಗಟಾಗಿ ರದ್ದುಪಡಿಸಬೇಕು.ವಿವಿಧ ಸೌಲಭ್ಯ, ಹುದ್ದೆಗಳಿಗಾಗಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆದವರನ್ನು ವಿಶೇಷ ಆಯೋಗ ರಚನೆ ಮಾಡಿ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕು.

-ಸುಭಾಷ್ ಕಾನಡೆ,

ರಾಜ್ಯ ಪರಿಶಿಷ್ಟ ಜಾತಿ ಅಧ್ಯಯನ ಸಮಿತಿಯ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X