Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯವಾದಿ ಶಿಕ್ಷಣ ವ್ಯವಸ್ಥೆಯಿಂದ...

ರಾಷ್ಟ್ರೀಯವಾದಿ ಶಿಕ್ಷಣ ವ್ಯವಸ್ಥೆಯಿಂದ ಹಿಂದೆ ಸರಿಯುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ23 May 2022 4:59 PM IST
share
ರಾಷ್ಟ್ರೀಯವಾದಿ ಶಿಕ್ಷಣ ವ್ಯವಸ್ಥೆಯಿಂದ ಹಿಂದೆ ಸರಿಯುವುದಿಲ್ಲ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಮೇ, 23: ‘ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾದರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸೋಮವಾರ ಚಾಮರಾಜಪೇಟೆ ಉದಯ ಭಾನು ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ಆಚಾರ್ಯ ನವರತ್ನ ಸುರಿಜಿ ಮಹಾರಾಜ್ ನೇತೃತ್ವದಲ್ಲಿ ನಡೆದ ಬಾಲಕರು ಮತ್ತು ಬಾಲಕಿಯರಿಗೆ ಸನ್ಯಾಸ ಧೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರಕಾರ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತರುತ್ತಿದ್ದು, ರಾಷ್ಟ್ರೀಯವಾದಿ ಸಮಾಜ ನಿರ್ಮಿಸಲು ಪ್ರತಿಯೊಬ್ಬರಿಗೂ ದೇಶ ಪ್ರೇಮ ಮೂಡಿಸುವ ಶಿಕ್ಷಣದ ಅಗತ್ಯವಾಗಿದೆ. ನಾವು ಬ್ರಿಟಿಷ್ ಮಾದರಿಯ ಶಿಕ್ಷಣ ವ್ಯವಸ್ಥೆಯಿಂದ ಇನ್ನೂ ಮುಕ್ತವಾಗಿಲ್ಲ. ಹೀಗಾಗಿ ಒಂದು ಅಥವಾ 2ನೆ ತರಗತಿಯಲ್ಲಿ ನೈತಿಕ ಶಿಕ್ಷಣದ ಪಾಠಗಳನ್ನು ಅಳವಡಿಸುತ್ತೇವೆ. ಹೀಗಾಗಿ ರಾಷ್ಟ್ರೀಯವಾದಿ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಲು ತೀರ್ಮಾನಿಸಿದ್ದೇವೆ' ಎಂದು ಹೇಳಿದರು.

‘ಶಿಕ್ಷಣ ವ್ಯವಸ್ಥೆಯನ್ನು ಬದಲಾವಣೆ ಮಾಡದಿದ್ದರೆ ಜನ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ ಎಂಬುದು ಪ್ರಧಾನಿ ಮೋದಿ ಅವರ ಪ್ರತಿಪಾದನೆಯಾಗಿದ್ದು, ಇದೇ ಹಾದಿಯಲ್ಲಿ ರಾಜ್ಯ ಸರಕಾರ ಮುನ್ನಡೆಯುತ್ತಿದೆ. ನಮಗೆ ದೇಶದಲ್ಲಿ ಔಪಚಾರಿಕ ಶಿಕ್ಷಣ ಬಹಳಷ್ಟು ಕಡೆಗಳಲ್ಲಿ ಸಿಗುತ್ತದೆ. ತಾಯಿ, ನಂತರ ಗುರುಗಳಿಂದಲೂ ಶಿಕ್ಷಣ ದೊರೆಯುತ್ತಿದೆ. ಆದರೆ ನೈತಿಕ ಶಿಕ್ಷಣ ಮತ್ತು ರಾಷ್ಟ್ರೀಯವಾದಿ ಶಿಕ್ಷಣ ದೊರೆಯುವುದಿಲ್ಲ ಎಂದು ಅವರು ತಿಳಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ‘ಮೋದಿ ಅವರ ಸ್ವಾವಲಂಬಿ ಭಾರತ ನಿರ್ಮಾಣ ಮಾಡಲು ಧಾರ್ಮಿಕ ಸಮುದಾಯ ಒಳಗೊಂಡಂತೆ ಎಲ್ಲರ ಸಹಕಾರ ಅಗತ್ಯ. ದೇಶದಲ್ಲಿ ಹಲವು ಸಮಸ್ಯೆಗಳಿದ್ದು, ಇವೆಲ್ಲವುಗಳಿಗೂ ಪರಿಹಾರಗಳಿವೆ. ಜೈನಧರ್ಮ ಹಾಗೂ ಮೋದಿಯವರು ಸ್ವಾವಲಂಬಿ ಭಾರತದ ಚಿಂತನೆಗಳನ್ನು ನೀಡಿದ್ದಾರೆ. ಇಂತಹ ಚಿಂತನೆಗಳನ್ನು ಸಾಕಾರಗೊಳಿಸಲು ಧಾರ್ಮಿಕ ವರ್ಗ ಕೈಜೋಡಿಸಬೇಕು' ಎಂದು ಹೇಳಿದರು.

‘ಹಿಂಸೆಯಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಾಧ್ಯವಿಲ್ಲ. ಅಹಿಂಸೆಯೇ ಎಲ್ಲದಕ್ಕೂ ಮದ್ದು ಎಂದು ಜೈನ ಧರ್ಮ ನಮಗೆ ಕಲಿಸಿಕೊಟ್ಟಿದೆ. ಇದೇ ಉದ್ದೇಶದಿಂದ ನಮ್ಮ ಪೂರ್ವಜರು ವಸುದೈವ ಕುಟುಂಬಕಂ ಎಂಬ ಪರಿಕಲ್ಪನೆಯನ್ನು ನೀಡಿದ್ದಾರೆ. ಇಡೀ ವಿಶ್ವ, ಇಡೀ ಬ್ರಹ್ಮಾಂಡ ನಮ್ಮ ಪರಿವಾರವಾಗಿದ್ದು, ಇದೇ ಮಾರ್ಗದಲ್ಲಿ ನಡೆಯುವುದು ನಮ್ಮ ಧ್ಯೇಯ. ಎಲ್ಲರೂ ಸುಖಿಯಾಗಿದ್ದರೆ, ನಿರೋಗಿಯಾಗುತ್ತಾರೆ. ನಾವು ಬದುಕಬೇಕು. ಮತ್ತೊಬ್ಬರಿಗೂ ಬದಕಲು ಬಿಡಬೇಕು. ನಮ್ಮ ಬದುಕು ಪ್ರೇಮ ಭಾವನೆಯಿಂದ ಕೂಡಿರಬೇಕು. ಇಂತಹ ಮನೋಭಾವನೆಗಳಿಂದ ತೊಂದರೆಗಳು ದೂರಾಗಲಿವೆ ಎಂದರು. ಸಂಸದ ಪಿ.ಸಿ.ಮೋಹನ್, ಶಾಸಕರಾದ ಝಮೀರ್ ಅಹಮದ್ ಖಾನ್, ಉದಯ್ ಗರುಡಾಚಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X