Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಲುಲು...

ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆಗೆ ಸಿಎಂ ಬೊಮ್ಮಾಯಿ ಒಪ್ಪಂದ

ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ, ಹೀರೋ ಮೋಟೋಕಾರ್ಪ್ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಿಎಂ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ23 May 2022 6:20 PM IST
share
ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಲುಲು ಗ್ರೂಪ್ ನೊಂದಿಗೆ 2000 ಕೋಟಿ ರೂ. ಹೂಡಿಕೆಗೆ ಸಿಎಂ ಬೊಮ್ಮಾಯಿ ಒಪ್ಪಂದ

ದಾವೋಸ್, ಮೇ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಲುಲು ಗ್ರೂಪ್ ಇಂಟರ್ ನ್ಯಾಷನಲ್‍ನ ನಿರ್ದೇಶಕ ಎ.ವಿ.ಅನಂತರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು. 

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ವಿಶ್ವದ ಪ್ರಮುಖ ಸಂಸ್ಥೆಗಳೊಂದಿಗೆ ಸಿಎಂ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಾವೋಸ್‍ನಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮೆನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು.

ಜ್ಯೂಬಿಲಿಯಂಟ್ ಗ್ರೂಪ್: ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಮುಖ್ಯಮಂತ್ರಿ, ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪೆÇ್ರೀತ್ಸಾಹಕ ಪ್ಯಾಕೇಜ್ ಅನ್ನು ಪರಿಗಣಿಸಬಹುದಾಗಿದೆ. ಜ್ಯೂಬಿಲಿಯಂಟ್ ಫುಡ್ ವಕ್ರ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯದ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ 9000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಭಾರತದಲ್ಲಿ ಏಳು, ಯು.ಎಸ್‍ನಲ್ಲಿ ಎರಡು ಮತ್ತು ಕೆನಡಾದಲ್ಲಿ ಒಂದು ಸೇರಿದಂತೆ ಹತ್ತು ಜಾಗತಿಕವಾಗಿ ಮಾನದಂಡದ ಉತ್ಪಾದನಾ ಸೌಲಭ್ಯಗಳನ್ನು ಹೊಂದಿದೆ. ಭಾರತದ ಗುಜರಾತ್‍ನ ಸಮಾಲಯ ಮತ್ತು ಭರೂಚ್, ಮಹಾರಾಷ್ಟ್ರದ ಅಂಬರನಾಥ್ ಮತ್ತು ನೀರಾ, ಕರ್ನಾಟಕದ ನಂಜನಗೂಡು, ಉತ್ತರಾಖಂಡದ ರೂರ್ಕಿಯಲ್ಲಿ ಹಾಗೂ ಉತ್ತರ ಪ್ರದೇಶದ ಗಜ್ರೌಲಾದಲ್ಲಿ 7 ಸೌಲಭ್ಯಗಳನ್ನು ಹೊಂದಿದೆ ಎಂಬ ಮಾಹಿತಿಯನ್ನು ಕಂಪನಿಯ ಸಂಸ್ಥಾಪಕರು ಮುಖ್ಯಮಂತ್ರಿಗೆ ಒದಗಿಸಿದರು.

ಹಿಟಾಚಿ ಎನರ್ಜಿ: ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇವಿ ಚಾರ್ಜಿಂಗ್‍ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕವನ್ನು ಉದ್ಘಾಟಿಸುತ್ತಿದ್ದಾರೆ. 2 ಸಾವಿರ ಇಂಜಿನಿಯರ್‍ಗಳನ್ನು ಹೊಂದಿರುವ ಇಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ. ಹಿಟಾಚಿ ಸಂಸ್ಥೆಯ ಕೇಂದ್ರ ಸ್ಥಾನ ಬೆಂಗಳೂರಿನಲ್ಲಿದೆ.

ಸೀಮೆನ್ಸ್: ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆ. ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ ತಿಂಗಳಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಯನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮೆನ್ಸ್ ಸಂಸ್ಥೆ 2,500 ಇಂಜಿನಿಯರ್‍ಗಳನ್ನು ಹೊಂದಿದೆ. 

ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ರಾಜ್ಯ ಸರಕಾರ ಒದಗಿಸುವ ಭರವಸೆ ನೀಡಿದೆ. ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರಕಾರ ಮತ್ತು ಸೀಮೆನ್ಸ್ ಸಂಸ್ಥೆ ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

#Karnataka signed an MoU with #LuluGroup for establishing shopping malls, hypermarkets and export oriented food stores. These malls will be set up in #Tier2 cities and will generate 10,000+ employment opportunities. #WEF2022 #KarnatakaAtDavos #BuildForTheWorld @LuLuGroup_India pic.twitter.com/4XLk2KIB10

— Basavaraj S Bommai (@BSBommai) May 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X