Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು...

​ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ

ಮಳೆಗಾಲದ ಸಿದ್ಧತೆ ಬಗ್ಗೆ ಸಭೆ

ವಾರ್ತಾಭಾರತಿವಾರ್ತಾಭಾರತಿ23 May 2022 3:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ

ಉಡುಪಿ: ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಪಂಚಾಯತ್ ರಸ್ತೆ, ಗ್ರಾಮೀಣ ರಸ್ತೆಗಳು ಸೇರಿದಂತೆ ಯಾವುದೇ ರಸ್ತೆಯಲ್ಲಿ ಮಳೆಯ ನೀರು ನಿಲ್ಲದೇ, ಸರಾಗವಾಗಿ ಹರಿದುಹೋಗುವಂತೆ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಯಾವುದೇ ಅನಾಹುತಗಳು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅಧಿಕಾರಿ ಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ಸಂದರ್ಭದಲ್ಲಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರು ಗಳು ಬರುತ್ತಿದ್ದು, ರಸ್ತೆ ನಿರ್ಮಾಣ ಸಂದರ್ಭದಲ್ಲಿ ರೂಪಿಸಿದ್ದ ಯೋಜನೆಯಂತೆ ಮಳೆ ನೀರು ಹರಿಯಲು ಅಗತ್ಯ ವ್ಯವಸ್ಥೆ ಮಾಡಬೇಕು. ಅವೈಜ್ಞಾನಿಕವಾಗಿ ಮಾಡಿರುವ ಕಾಮಗಾರಿಗಳನ್ನು ತೆರವುಗೊಳಿಸಬೇಕು ಎಂದರು.

ಈ ಸ್ಥಳಗಳಿಗೆ ಕುಂದಾಪುರ ತಹಶೀಲ್ದಾರ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಯಾವುದೇ ಭಾಗದಲ್ಲಿ ಮಳೆಯಿಂದ ಅವಘಡಗಳು ಸಂಭವಿಸದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, 2 ದಿನದಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕ್ರಮಕೈಗೊಳ್ಳಿ: ಉಡುಪಿ ನಗರಸಭೆ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಖಾಸಗಿ ಜಾಗದಲ್ಲಿ ಮಳೆ ನೀರು ಹರಿಯುವ ಜಾಗದಲ್ಲಿ ತಡೆ ಹಾಕಿರುವುದು ಕಂಡು ಬಂದಲ್ಲಿ ಅದನ್ನು ಯಾವುದೇ ಮುಲಾಜಿಲ್ಲದೇ ಒಡೆದು ಹಾಕಿ. ಖಾಸಗಿ ವ್ಯಕ್ತಿಗಳು ಈ ಕಾರ್ಯಕ್ಕೆ ಅಡಚಣೆ ಮಾಡಿದಲ್ಲಿ ಪ್ರಾಕೃತಿಕ ವಿಕೋಪ ಕಾಯ್ದೆಯಡಿ ನೀಡಿರುವ ಅಧಿಕಾರ ಚಲಾಯಿಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ರಸ್ತೆ ಬದಿಗಳಲ್ಲಿ ಇರುವ ಅಪಾಯಕಾರಿ ಮರಗಳ ವಿವರಗಳನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಪಟ್ಟಿ ಮಾಡಿ, ಅರಣ್ಯ ಇಲಾಖೆಗೆ ಸಲ್ಲಿಸುವಂತೆ ತಿಳಿಸಿದ ಸಚಿವರು, ಅರಣ್ಯ ಇಲಾಖೆಯಿಂದ ಆದ್ಯತೆಯ ಮೇಲೆ ಅವುಗಳನ್ನು ತೆರವುಗೊಳಿಸಲು ಅನುಮತಿ ನೀಡಬೇಕು. ಅರಣ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ತಮ್ಮ ಕೆಳಹಂತದ ಸಿಬ್ಬಂದಿಗಳಿಗೂ ಅಗತ್ಯ ನಿರ್ದೇಶನ ಗಳನ್ನು ನೀಡಿ, ಮಳೆಯಿಂದ ಬಿದ್ದ ಮರಗಳನ್ನು ತಕ್ಷಣ ತೆರವುಗೊಳಿಸಲು ಮತ್ತು ಅಪಾಯಕಾರಿ ಮರಗಳ ತೆರವು ಕುರಿತು ಕೋರುವ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸೂಚಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ಅಗತ್ಯವಿರುವ ಎಲ್ಲಾ ರಕ್ಷಣಾ ಪರಿಕರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಹಾಗೂ ಅಗತ್ಯವಿದ್ದಲ್ಲಿ ಮೀನುಗಾರಿಕೆ ಇಲಾಖೆಯಿಂದ ಬೋಟುಗಳನ್ನು ಪಡೆಯುವಂತೆ ತಿಳಿಸಿದರು.

ಮಳೆಗಾಲದಲ್ಲಿ ಡೆಂಗಿ, ಮಲೇರಿಯಾದಂತಹ ಕಾಯಿಲೆಗಳು ಉಲ್ಬಣ ವಾಗದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳ ಸಮೀಪ ನೀರು ನಿಲ್ಲದಂತೆ ಹಾಗೂ ಸೊಳ್ಳೆಗಳ ಬೆಳವಣಿಗೆ ತಡೆಯುವ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮೂಲಕ ಮನೆ ಮನೆಗೆ ಸ್ವಚ್ಚತೆ ಕಾಪಾಡುವ ಕುರಿತಂತೆ ಸಂದೇಶ ರವಾನಿಸಲು ಕ್ರಮ ಕೈಗೊಳ್ಳಿ. ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚು ನಿಗಾ ವಹಿಸಿ ಎಂದರು.

ಶಾಸಕ ರಘುಪತಿ ಭಟ್ ಮಾತನಾಡಿ, ಮಳೆಯಿಂದ ಮನೆಗಳಿಗೆ ಆಗುವ ಹಾನಿಗೆ ನೀಡುವ ಪರಿಹಾರ ಅತ್ಯಂತ ಕಡಿಮೆ ಇದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಮಳೆಯಿಂದ ಮನೆ ಮತ್ತು ಆಸ್ತಿ-ಪಾಸ್ತಿಗಳು ಹಾನಿಯಾದ ಸಂದರ್ಭದಲ್ಲಿ ನಷ್ಠದ ಅಂದಾಜು ಮಾಡುವಾಗ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಪ್ರಕರಣಗಳನ್ನು ಗಮನಿಸಿ, ಸಂತ್ರಸ್ಥರಿಗೆ ಗರಿಷ್ಠ ನೆರವು ಒದಗಿಸಬೇಕು ಎಂದು ಸಚಿವ ಅಂಗಾರ ತಿಳಿಸಿದರು.

ಜಿಲ್ಲೆಯಲ್ಲಿ ಮಾನ್ಸೂನ್‌ನಿಂದ ಆಗುವ ಹಾನಿಯನ್ನು ತಪ್ಪಿಸಲು ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಕ್ಲಿಷ್ಟಕರ ಸಮಸ್ಯೆ ಇದ್ದಲ್ಲಿ ಕೂಡಲೇ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವರು, ತುರ್ತು ನೆರವಿನ ಅಗತ್ಯವಿದ್ದಲ್ಲಿ ಯಾವುದೇ ಸಂದರ್ಭದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕರಾವಳಿ ಕಾವಲು ಪಡೆ ಎಸ್ಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ವೀಣಾ, ಕುಂದಾಪುರ ಡಿಎಫ್‌ಓ ಆಶೀಶ್ ರೆಡ್ಡಿ, ಕಾರ್ಕಳ ಡಿಎಫ್‌ಓ ಗಣಪತಿ, ಎಎಸ್ಪಿ ಸಿದ್ಧಲಿಂಗಪ್ಪ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X