Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಾವೋಸ್‍ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ...

ದಾವೋಸ್‍ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ23 May 2022 8:49 PM IST
share
ದಾವೋಸ್‍ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

ದಾವೋಸ್/ಬೆಂಗಳೂರು, ಮೇ 23: ಮೂರು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ಬೆಂಗಳೂರಿನ ಪೂರ್ವ ವಲಯದಲ್ಲಿ 691 ಮನೆಗಳಿಗೆ ನೀರು ನುಗ್ಗಿ ನಷ್ಟವಾಗಿದ್ದು, ಈ ಕುಟುಂಬಗಳಿಗೆ ಎರಡು ದಿನಗಳೊಳಗೆ ತಲಾ 25,000 ರೂಪಾಯಿ ಪರಿಹಾರ ನೀಡಬೇಕು ಎಂದು ಕಾರ್ಯಪಡೆ ಮುಖ್ಯಸ್ಥ ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳೆಯಿಂದ ಉಂಟಾಗುವ ಸಮಸ್ಯೆಗಳ ನಿರ್ವಹಣೆಗೆ ಬೆಂಗಳೂರು ಪೂರ್ವ ವಲಯದ ಕಾರ್ಯಪಡೆ ಮುಖ್ಯಸ್ಥರಾಗಿ ನೇಮಕಗೊಂಡಿರುವ ಅವರು, ದಾವೋಸ್‍ನಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ಸಂದರ್ಭದಲ್ಲಿ ಈ ಸೂಚನೆ ನೀಡಿದರು.

ತಲಾ 25,000 ರೂಪಾಯಿಯಂತೆ ದವಸ ಧಾನ್ಯ ನಷ್ಟದಂತಹ ಸಮಸ್ಯೆಗಳನ್ನು ಎದುರಿಸಿರುವ 691 ಕುಟುಂಬಗಳಿಗೆ ಒಟ್ಟು ಪರಿಹಾರದ ಮೊತ್ತ 1.73 ಕೋಟಿ ರೂಪಾಯಿ ಆಗುತ್ತದೆ. ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರ ಮುಗಿಸಿ ಬುಧವಾರ ಸಂಬಂಧಿಸಿದವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ (ಡಿಬಿಟಿ) ಮಾಡಬೇಕು ಎಂದು ಅಶ್ವತ್ಥ ನಾರಾಯಣ ಕಾಲಮಿತಿ ನಿಗದಿಗೊಳಿಸಿದರು.

ಚರಂಡಿಗಳಲ್ಲಿ ಹೂಳೆತ್ತುವ ಡೀಸಿಲ್ಟಿಂಗ್ ಕೆಲಸವನ್ನು ಗುತ್ತಿಗೆದಾರರಿಗೆ ಈ ಮುಂಚೆಯೇ ವಹಿಸಲಾಗಿತ್ತು. ಆದರೆ ಇದೀಗ ಗಮನಕ್ಕೆ ಬಂದಿರುವಂತೆ 7 ಕಡೆಗಳಲ್ಲಿ ಗುತ್ತಿಗೆದಾರರು ಡೀಸಿಲ್ಟಿಂಗ್ ಮಾಡಿಲ್ಲ ಎಂಬುದು ಗೊತ್ತಾಗಿದೆ. ಸಂಬಂಧಿಸಿದ ಈ ಗುತ್ತಿಗೆದಾರರಿಗೆ ತಕ್ಷಣವೇ ನೋಟಿಸ್ ಕೊಟ್ಟು ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ, 20 ದಿವಸಗಳೊಳಗೆ ಡೀಸಿಲ್ಟಿಂಗ್ ಮಾಡಿಸಿ ಚರಂಡಿಗಳಲ್ಲಿ ನೀರು ಅಡೆತಡೆ ಇಲ್ಲದಂತೆ ಹರಿಯುವಂತೆ ಮಾಡಬೇಕು ಎಂದು ಅವರು ಆದೇಶಿಸಿದರು.

ಪೂರ್ವ ವಲಯದಲ್ಲಿ ನೀಲಸಂದ್ರ, ಫ್ರೇಜರ್ ಟೌನ್, ಸಂಜಯನಗರ ಸೇರಿದಂತೆ 22 ಸ್ಥಳಗಳನ್ನು ‘ರೆಡ್ ಜೋನ್’ ಎಂದು ಗುರುತಿಸಲಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಅಧಿಕಾರಿಗಳು ತಗ್ಗಿನ ಪ್ರದೇಶಕ್ಕೆ ನೀರು ನುಗ್ಗಬಹುದಾದ ಸಾಧ್ಯತೆಯನ್ನು ನಿರ್ವಹಿಸಲು ಸ್ಥಳಾಂತರಕ್ಕಾಗಿ ಮೊದಲೇ ಯೋಜನೆ ಹಾಕಿಕೊಳ್ಳಬೇಕು. ಇದಕ್ಕಾಗಿ ಹತ್ತಿರದ ಶಾಲೆ ಮತ್ತಿತರ ಕಡೆಗಳಲ್ಲಿ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಅಧಿಕಾರಿಗಳು ರೆಡ್ ಜೋನ್‍ಗಳಲ್ಲಿ ವಾಸಿಸುತ್ತಿರುವ ಜನರ ಜೊತೆ ಸಂಪರ್ಕದಲ್ಲಿದ್ದು ಹವಮಾನ ಮುನ್ಸೂಚನೆ ಆಧಾರಿತವಾಗಿ ತಯಾರಿ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಪೂರ್ವ ವಲಯದಲ್ಲಿ ಎರಡು ದಿನಗಳ ಅವಧಿಯಲ್ಲಿ 11 ಸೆಂ.ಮೀ.ನಷ್ಟು ಹೆಚ್ಚಿನ ಮಳೆ ಸುರಿದಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ಕೊಟ್ಟರು. ವಲಯ ಆಯಕ್ತ ರವೀಂದ್ರ, ಜಂಟಿ ಆಯುಕ್ತೆ ಶಿಲ್ಪಾ, ಮುಖ್ಯ ಎಂಜಿನಿಯರ್ ಮೋಹನ್ ಹಾಗೂ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X