ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಿಂದ ಎಮ್ ನಾಗರಾಜ್ ಹಾಗೂ ಅಬ್ದುಲ್ ಜಬ್ಬಾರ್ ಅವರು ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ , ಆರ್.ವಿ.ದೇಶಪಾಂಡೆ ಹಾಗೂ ಬಿ.ಕೆ ಹರಿಪ್ರಸಾದ್ ಅವರು ಉಪಸ್ಥಿತರಿದ್ದರು.
ಜೆಡಿಎಸ್ ಅಭ್ಯರ್ಥಿ ಮಾಜಿ ಸದಸ್ಯ ಟಿ.ಎ.ಶರವಣ ಅವರು ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ್, ತಿಪ್ಪೇಸ್ವಾಮಿ, ಶಾಸಕ ಆಶ್ವಿನ್ ಕುಮಾರ್ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.








