Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಲ್ಮನೆ ಚುನಾವಣೆ; ಬಿಜೆಪಿ...

ಮೇಲ್ಮನೆ ಚುನಾವಣೆ; ಬಿಜೆಪಿ ಅಭ್ಯರ್ಥಿಗಳಿಗೆ ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ24 May 2022 1:56 PM IST
share
ಮೇಲ್ಮನೆ ಚುನಾವಣೆ; ಬಿಜೆಪಿ ಅಭ್ಯರ್ಥಿಗಳಿಗೆ ನಳಿನ್‍ ಕುಮಾರ್ ಕಟೀಲ್ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದೆ. ರಾಜ್ಯದಿಂದ ಕೋರ್ ಕಮಿಟಿ ತೀರ್ಮಾನ ಮಾಡಿ ಕಳುಹಿಸಿದ ಹೆಸರುಗಳಲ್ಲಿ 4 ಹೆಸರುಗಳನ್ನು ನಮ್ಮ ರಾಷ್ಟ್ರೀಯ ನಾಯಕರ ತಂಡ ಪ್ರಕಟಿಸಿದೆ. ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಎಸ್.ಕೇಶವಪ್ರಸಾದ್ ಮತ್ತು ಲಕ್ಷ್ಮಣ ಸವದಿ ಪಕ್ಷದಿಂದ ಸ್ಪರ್ಧಿಸಲಿದ್ದು ಅವರಿಗೆ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ಪಕ್ಷದ ರಾಜ್ಯ ಉಪಾಧ್ಯಕ್ಷರು, ಹೇಮಲತಾ ನಾಯಕ್ ಅವರು ಪಕ್ಷದ ಕಾರ್ಯದರ್ಶಿ, ಛಲವಾದಿ ನಾರಾಯಣಸ್ವಾಮಿ ಅವರು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರು, ಕೇಶವಪ್ರಸಾದ್ ಅವರು ಕಾರ್ಯದರ್ಶಿಗಳು ಮತ್ತು ಪ್ರಭಾರಿ ಎಂದು ವಿವರಿಸಿದರು. ನೈಋತ್ಯ ಕ್ಷೇತ್ರದ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರನ್ನು ಪ್ರಕಟಿಸಿದ್ದು, ಅವರಿಗೂ ಅಭಿನಂದನೆಗಳು ಎಂದರು. 

ನರೇಂದ್ರ ಮೋದಿಯವರ ಸರಕಾರ ಅದ್ಭುತವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷದವರು ಬೆಲೆ ಏರಿಕೆ ವಿರುದ್ಧ ಟೀಕೆ ಮಾಡುತ್ತಿದ್ದರು. ಆದರೆ, ಕೇಂದ್ರ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಸುಂಕ ಕಡಿಮೆ ಮಾಡಿ ದರ ಕಡಿಮೆ ಆಗುವಂತೆ ಮಾಡಿದೆ. ಜೊತೆಗೆ ಎಲ್‍ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿ ಪ್ರಕಟಿಸಿರುವುದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದರು. ಆರ್ಥಿಕ ಸಂಕಷ್ಟದ ನಡುವೆ ಜನಪರವಾಗಿ ನರೇಂದ್ರ ಮೋದಿಯವರ ಸರಕಾರ ಸ್ಪಂದಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದೆ. ಕೆಲವೆಡೆ ನೆರೆ ಸಮಸ್ಯೆಯೂ ಬಾಧಿಸಿದೆ. ಮುಖ್ಯಮಂತ್ರಿಗಳು ತಕ್ಷಣ ನೆರೆಬಾಧಿತ ಪ್ರದೇಶಕ್ಕೆ ತೆರಳಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಕರ್ನಾಟಕಕ್ಕೆ ವಿಶೇಷ ಉದ್ಯಮಗಳು ಬರುವುದು ಖಚಿತವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಅಭ್ಯರ್ಥಿ ಆಯ್ಕೆ ವಿಳಂಬವಾಗಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಪಕ್ಷವು ಯುವಕರಿಗೆ ಮತ್ತು ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅನುಭವವೂ ಬೇಕು ಎಂಬ ಆಶಯದಿಂದ “ಹಳೆ ಬೇರು ಹೊಸ ಚಿಗುರು ಕೂಡಿರಲು ಬಲು ಸೊಬಗು” ಎಂಬಂತೆ ಆಯ್ಕೆ ನಡೆದಿದೆ ಎಂದು ತಿಳಿಸಿದರು.

ಕುಟುಂಬಕ್ಕೆ ಬಂದ ಸೊಸೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅಂತೆಯೇ ಆಯ್ಕೆ ನಡೆದಿದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ರಾಜ್ಯದಿಂದ 20 ಹೆಸರುಗಳನ್ನು ಕಳುಹಿಸಲಾಗಿತ್ತು. 4 ಸೀಟಿಗೆ ನಾಲ್ಕೇ ಜನರಿಗೆ ಅವಕಾಶ ಕೊಡಲಾಗುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X