ಕೊರೋನ ಮಾರ್ಗಸೂಚಿ ಉಲ್ಲಂಘನೆ: ಶಾಸಕ ರಂಗನಾಥ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು, ಮೇ 24: ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆರೋಪದಲ್ಲಿ ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕುಣಿಗಲ್ ಜೆಎಂಎಫ್‍ಸಿ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಎಚ್.ಡಿ.ರಂಗನಾಥ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಮಧ್ಯಂತರ ಆದೇಶ ಮಾಡಿದೆ.
ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಕುಣಿಗಲ್ ಪೊಲೀಸ್ ಠಾಣಾಧಿಕಾರಿ ಹಾಗೂ ಪ್ರಕರಣದ ದೂರುದಾರ ಪಿ.ಎಚ್.ಗೋವಿಂದರಾಜುಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು.
Next Story





