Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಜಾತಿ ಸಮಾವೇಶ' ಮಾಡುವ ಸಿದ್ದರಾಮಯ್ಯ...

‘ಜಾತಿ ಸಮಾವೇಶ' ಮಾಡುವ ಸಿದ್ದರಾಮಯ್ಯ ಡೋಂಗಿ ಜಾತ್ಯತೀತ ನಾಯಕ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 May 2022 6:58 PM IST
share
‘ಜಾತಿ ಸಮಾವೇಶ ಮಾಡುವ ಸಿದ್ದರಾಮಯ್ಯ ಡೋಂಗಿ ಜಾತ್ಯತೀತ ನಾಯಕ: ಕುಮಾರಸ್ವಾಮಿ

ಬೆಂಗಳೂರು, ಮೇ 24: ‘ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಡೋಂಗಿ ಜಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ ಪಕ್ಷವನ್ನು ಬಿಜೆಪಿ ‘ಬಿ' ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ. ಈಚೆಗೆ ತುಮಕೂರಿನಲ್ಲೂ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಅವರೇ ಜಾತಿವಾರು ಸಮಾವೇಶ ಮಾಡಿಕೊಂಡು ನಾವು ಜಾತ್ಯತೀತರು ಎಂದು ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ' ಎಂದು ಕಿಡಿಕಾರಿದರು.

‘ಬಿಜೆಪಿ ಜತೆ ಸರಕಾರ ಮಾಡಿದಾಗಲೂ ಕೋಮು ಸಂಘರ್ಷಕ್ಕೆ ಅವಕಾಶ ಕೊಡಲಿಲ್ಲ. ಒಂದು ಸಣ್ಣ ಕೋಮು ಸಂಘರ್ಷ ಘಟನೆ ನಡೆಯಲಿಲ್ಲ. ಆದರೆ ಈಗ ಏನಾಗಿದೆ? ಅನೇಕ ತಿಂಗಳಿನಿಂದ ಸಮಾಜವನ್ನು ಒಡೆಯುವ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಯಾರು? ಇಂಥ ಸರಕಾರ ಬರಲು ಕಾರಣ ಯಾರು? ಎನ್ನುವುದು ಜನತೆಗೆ ಗೊತ್ತಿದೆ' ಎಂದು ಅವರು ಟೀಕಿಸಿದರು.

‘ಪಕ್ಷ ಉಳಿಸುವುದಕ್ಕೆ ನಾನು ಬಿಜೆಪಿ ಜತೆ ಸೇರಿ ಸರಕಾರ ಮಾಡಿದೆ. ಅದೇ ರೀತಿ ಕಾಂಗ್ರೆಸ್ ಜತೆಯಲ್ಲೂ ಸೇರಿ ಸರಕಾರ ಮಾಡಿದೆ. ಆದರೆ ಇವತ್ತಿಗೂ ಕಾಂಗ್ರೆಸ್‍ನವರು ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಹೇಳುತ್ತಾರೆ. ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಸರಕಾರದಲ್ಲಿ ಮಂತ್ರಿ ಆಗಿದ್ದರು. ಈಗ ಕಾಂಗ್ರೆಸ್ ಪಕ್ಷವೇ ಮಹಾರಾಷ್ಟ್ರದಲ್ಲಿ ಶಿವಸೇನೆ ಜತೆ ಸರಕಾರ ಮಾಡಿದೆ. ಇದಕ್ಕೆ ಏನೆಂದು ಹೇಳಬೇಕು' ಎಂದು ಅವರು ಕುಟುಕಿದರು.

‘ಮಾತಿಗೆ ಮುಂಚೆ ನಾವು ಜಾತ್ಯತೀತರು ಎಂದು ಹೇಳಿಕೊಳ್ಳುವ ನೀವು, ರಾಜಕಾರಣ ಮಾಡುತ್ತಿರುವುದು ಯಾರ ಹೆಸರಲ್ಲಿ? ಮಡಿವಾಳ, ಅಲ್ಪಸಂಖ್ಯಾತ ಸಮಾವೇಶ ಮಾಡ್ತೀರಾ? ಹಾಗಾದರೆ ಅದು ಏನು? ಐದು ವರ್ಷ ಸರಕಾರ ನಡೆಸಿದಾಗ ಈ ಸಮುದಾಯದವರಿಗೆ ಏನು ಮಾಡಿದಿರಿ? ಕಾಂಗ್ರೆಸ್‍ನವರು ಜಾತ್ಯತೀತತೆ ಬಗ್ಗೆ ಚರ್ಚೆ ಮಾಡಲು ನೈತಿಕತೆ ಉಳಿಸಿಕೊಂಡಿಲ್ಲ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ನಾನು ಯಾವ ಪಕ್ಷದ ಬಿ ಟೀಂ ಅಲ್ಲ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮ ವಹಿಸುತ್ತೇವೆ. ಬಿಜೆಪಿ ಸಾಮರಸ್ಯ ಹಾಳು ಮಾಡಲು ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಆ ಸಂಘಟನೆಗಳನ್ನು ಎದುರು ಹಾಕಿಕೊಂಡು ಹೋರಾಟ ನಡೆಸುತ್ತಿರುವವರು ನಾವು. ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಬಂದಾಗ ಕಾಂಗ್ರೆಸ್‍ನವರು ಮುಖಕ್ಕೆ ಮಂಗಳಾರತಿ ಮಾಡಿಸಿಕೊಂಡರು. ಆದರೂ ಪದೆಪದೇ ನಮ್ಮ ಪಕ್ಷದ ಬಗ್ಗೆ ಇವರು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಿ.ಎಂ.ಇಬ್ರಾಹೀಂ ಪಕ್ಷ ಬಿಟ್ಟ ಮೇಲೆ ನಮ್ಮ ಪಕ್ಷವನ್ನೇ ಮುಗಿಸಲು ಹೊರಟಿರಿ. ಆದರೂ, ನಾವು ಸಾಯಲು ಬಿಡಲಿಲ್ಲ. ಮತ್ತೆ ಇಬ್ರಾಹೀಂ ವಾಪಸ್ ಬಂದ ಮೇಲೆ ಅಲ್ಲಿ ಡೌನ್ ಫಾಲ್ ಆಗುತ್ತಿದೆ. ಇಬ್ರಾಹೀಂ ಅವರ ಕಾಲ್ಗುಣವೇ ಅಂತಹದ್ದು ಎಂದು ಅವರು ತಿಳಿಸಿದರು.

‘ರಾಜ್ಯಸಭಾ ಚುನಾವಣೆ ಕಾಂಗ್ರೆಸ್, ಬಿಜೆಪಿಗೆ ಹೋಲಿಕೆ ಮಾಡಿದರೆ ಜೆಡಿಎಸ್ ಪಕ್ಷಕ್ಕೆ ಮತಗಳು ಹೆಚ್ಚಿವೆ. ನಾವು ಅಭ್ಯರ್ಥಿ ಕಣಕ್ಕೆ ಇಳಿಸುತ್ತೇವೆ. ಆ ಪಕ್ಷಗಳು ಒಂದಿಷ್ಟು ಲೆಕ್ಕಾಚಾರ ಮಾಡುತ್ತಿದ್ದು, ನಾವು ಇಲ್ಲಿಯವರೆಗೆ ಯಾರ ಜೊತೆಯೂ ಚರ್ಚೆ ಮಾಡಿಲ್ಲ. ನಾಲ್ಕನೆ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ಅವರಿಗೂ ಇಲ್ಲ'

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X