Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ...

ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ: ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ

''ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ''

ವಾರ್ತಾಭಾರತಿವಾರ್ತಾಭಾರತಿ24 May 2022 8:22 PM IST
share
ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ: ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ

ಬೆಂಗಳೂರು: 'ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ 'ಎದೆಗೆ ಬಿದ್ದ ಅಕ್ಷರ' ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು' ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,  'ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ' ಎಂದು ಹೇಳಿದ್ದಾರೆ. 

'ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ' ಎಂದು ತಿಳಿಸಿದ್ದಾರೆ. 

'ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ. 

ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು ಎಂದು ಮನವಿ ಮಾಡುತ್ತೇನೆ. 

ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ. ಅವರಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X