Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಸವಿಲೇವರಿ ಸಮಸ್ಯೆ ಸರಿಪಡಿಸದಿದ್ದಲ್ಲಿ...

ಕಸವಿಲೇವರಿ ಸಮಸ್ಯೆ ಸರಿಪಡಿಸದಿದ್ದಲ್ಲಿ ಪ್ರತಿಭಟನೆ: ವಿನಯ ಕುಮಾರ್ ಸೊರಕೆ

ವಾರ್ತಾಭಾರತಿವಾರ್ತಾಭಾರತಿ24 May 2022 9:17 PM IST
share

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪ್ರಮುಖ ಪಂಚಾಯಿತಿಗಳಲ್ಲಿ ಕಸ ವಿಲೇವರಿ ಸಮಸ್ಯೆ ತಲೆದೋರಿದ್ದು, ಇದನ್ನು ಕೂಡಲೇ ಸರಿಪಡಿಸದಿದ್ದಲ್ಲಿ ಜನಪ್ರತಿನಿಧಿಗಳ ಮತ್ತು ಆಡಳಿತದ ಲೋಪವನ್ನು ಜನರ ಮುಂದಿಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರ ಸಹಕಾರದೊಂದಿಗೆ ವಿರೋಧ ಪಕ್ಷದ ನೆಲೆಯಲ್ಲಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಎಚ್ಚರಿಸಿದರು.

ಅವರು ಮಂಗಳವಾರ ಕಾಪು ಪ್ರೆಸ್‍ಕ್ಲಬ್‍ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಬಿದ್ರೆ ಪಂಚಾಯತ್‍ ನಲ್ಲಿ ಹಸಿಕಸವನ್ನು ಪಂಚಾಯಿತಿ ಕಚೇರಿಯ ಎದುರೇ ರಾಶಿ ಹಾಕಲಾಗಿದೆ. ಹೆಜಮಾಡಿ, ಪಲಿಮಾರು, ಉಚ್ಚಿಲ, ತೆಂಕ ಪಂಚಾಯಿತಿಗಳಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹಚ್ಚಾಗುತ್ತಿದೆ.

ನಾನು ಸಚಿವ, ಶಾಸಕನಾಗಿದ್ದ ಕಾಪು ಪುರಸಭೆ ಹಾಗೂ ಸುತ್ತಲಿನ ಗ್ರಾಮ ಪಂಚಾಯಿತಿಗಳ ತ್ಯಾಜ್ಯ ವಿಲೇವಾರಿಗೆ ಅನುಕೂಲವಾಗುವ ನಿಟ್ಟನಲ್ಲಿ ಎಲ್ಲೂರಿನಲ್ಲಿ 10 ಎಕರೆ ಜಮೀನು ಹಾಗೂ 5 ಕೋಟಿ ರೂ ಅನುದಾನದ ವ್ಯವಸ್ಥೆಗೊಳಿಸಿ ಜನರಿಗೆ ತೊಂದರೆಯಾಗದ ರೀತಿಯಲ್ಲಿ ವೈಜ್ಞಾನಿಕ ಮಾದರಿಯಲ್ಲಿ ಕಸ ವಿಲೇವಾರಿ ಘಟಕಕ್ಕೆ ವ್ಯವಸ್ಥೆ ಕಲ್ಪಿಸಿದ್ದೆವು. ಆದರೆ ಈಗಿನ ಆಡಳಿತ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷದಿಂದ ನಡೆದ ಘಟಕದ ಕಾಮಗಾರಿ ಅರೆಬರೆಯಾಗಿ ನಡೆದಿದ್ದು, ಕಸ ನಿರ್ವಹಣೆಗೆ ಯಂತ್ರೋಪಕರuಗಳ ಅಳವಡಿಕೆ ಯಾಗದೆ ಜನರು ಸಮಸ್ಯೆ ಅನುಭವಿಸುತಿದ್ದಾರೆ.

ಗೊಬ್ಬರ ಘಟಕ ಮಾಡಲು ಯಂತ್ರೋಪಕರಣಕ್ಕೆ ಹಣ ಉಳಿಸಿಲ್ಲ. ಸರಕಾರದಿಂದ ಹೊಸ ಅನುದಾನವ ತರುವ ಪ್ರಯತ್ನವನ್ನೂ ಮಾಡದೆ ತ್ಯಾಜ್ಯದಿಂದ ಜನರಿಗೆ ಸಮಸ್ಯೆಯಾಗುವಂತಾಗಿದೆ ಎಂದು ಆರೋಪಿಸಿದ ಅವರು, ಕಸ ಇಲೇವಾರಿಯಲ್ಲಿನ ಜನಪ್ರತಿನಿಧಿಗಳ ಮತ್ತು ಆಡಳಿತದ ಲೋಪವನ್ನು ಜನರ ಮುಂದಿಡುವ ನಿಟ್ಟಿನಲ್ಲಿ ಮುಂದೆ ತೀವ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಈಗ ಇತರ ಪಂಚಾಯತ್‍ಗಳ ತ್ಯಾಜ್ಯ ಎಲ್ಲೂರಿಗೆ ತರಬಾರದು ಎಂದು ಅಲ್ಲಿನವವರು ಒತ್ತಡ ಕೂಡಾ ಹಾಕುತ್ತಿದ್ದಾರೆ. ನಮ್ಮದೂ ಅಲ್ಲಿಗೇ ಕಸ ತರಲೇಬೇಕೆಂಬ ಒತ್ತಾಯವೇನೂ ಇಲ್ಲ ನಮ್ಮ ಒತ್ತಾಯ ಕಸದ ಸಮಸ್ಯೆ ಬಗೆಹರಿಸಬೇಕೆಂಬುದಷ್ಟೇ ಆಗಿದೆ. ಜಿಲ್ಲಾಡಳಿತ, ತಾಲೂಕು ಆಡಳಿತ, ಪುರಸಭೆ ಆಡಳಿತ ಹಾಗೂ ಜನಪ್ರತಿನಿಧಿಗಳು ಇದಕ್ಕೊಂದು ಸೂಕ್ತ ಪರಿಹಾರ ನೀಡಿ ಕ್ಷೇತ್ರದ ಕಸ ವಿಲೇವಾರಿಯನ್ನು ಸುಸೂತ್ರವಾಗಿ ವ್ಯವಸ್ಥೆಗೊಳಿಸಬೇಕು ಎಂದು ಒತ್ತಾಯಿಸಿದರು.

ಸಮುದ್ರಕ್ಕೆ ಕಲ್ಲುಹಾಕುವಲ್ಲಿ ಅವ್ಯವಹಾರ ತನಿಖೆಗೂ ಒತ್ತಾಯ : ಕಾಪು ಕ್ಷೇತ್ರದಲ್ಲಿ ಆಗಿರುವ ತಡೆಗೋಡೆ ಕಾಮಗಾರಿಯಲ್ಲಿ ಲೋಪಗಳಿದ್ದು  50 ಶೇ.ಕಾಮಗಾರ ಪೂರ್ಣಗೊಂಡಿಲ್ಲ ಪಡುಕೆರೆಯಿಂದ 79 ಕೋಟಿ ರೂ ತಡೆಗೋಡೆ, ಉಚ್ಚಿಲ ಪರಿಸರದಲ್ಲಿ 69 ಕೋಟಿ ಕಾಮಗಾರಿಗಳು ಇನ್ನೂ ಪೂರ್ತಿಗೊಂಡಿಲ್ಲ. ಪೊಲಿಪುವಿನಲ್ಲಿ ಇದ್ದ ತಡೆಗೋಡೆ ತೆಗೆದು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಸಮುದ್ರಕ್ಕೆ ಕಲ್ಲುಹಾಕುವಲ್ಲಿ ಎಷ್ಟು ಗುಳುಂ ಆಗಿದೆ ಎಂಬ ಬಗ್ಗೆಯೂ ತನಿಖೆಗೆ ಒತ್ತಾಯಿಸಲಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಮಗ್ರೆಸ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ, ಕಾಪು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಕಾಪು ಅಲ್ಪಸಂಕ್ಯಾತ ಘಟಕದ ಅಧ್ಯಕ್ಷ ಸರ್ಪುದ್ದೀನ್, ಕಾಪು ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಹಾಗೂ ಗ್ರಾ.ಪಂ ಸದಸ್ಯ ನವೀ‌ನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X