Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರೋಹಿತ್ ಚಕ್ರತೀರ್ಥರ ಹೆಸರು ಸೂಚಿಸಿದ್ದು...

ರೋಹಿತ್ ಚಕ್ರತೀರ್ಥರ ಹೆಸರು ಸೂಚಿಸಿದ್ದು ಸುರೇಶ್ ಕುಮಾರ್

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ

ಜಿ.ಮಹಾಂತೇಶ್ಜಿ.ಮಹಾಂತೇಶ್25 May 2022 8:39 AM IST
share
ರೋಹಿತ್ ಚಕ್ರತೀರ್ಥರ ಹೆಸರು ಸೂಚಿಸಿದ್ದು ಸುರೇಶ್ ಕುಮಾರ್

ಬೆಂಗಳೂರು: ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಸೂಚಿಸಿದ್ದು ಹಾಲಿ ಸಚಿವ ಬಿ.ಸಿ.ನಾಗೇಶ್ ಅವರಲ್ಲ. ಬದಲಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ಅವರು. ಅಷ್ಟೇ ಅಲ್ಲ, ರೋಹಿತ್ ಚಕ್ರತೀರ್ಥ ಅವರು ಸೂಚಿಸಿದ್ದವರನ್ನೇ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಹಾಗೆಯೇ ಈ ಸಮಿತಿಯು ನೀಡುವ ವರದಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿ ಅದಕ್ಕೆ ಸದಸ್ಯರನ್ನು ಹೆಸರಿಸಲಾಗುವುದು ಎಂದು ಅಂದಿನ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಆದರೆ ಉನ್ನತ ಮಟ್ಟದ ತಜ್ಞರನ್ನು ನೇಮಿಸಲಾಗಿದೆಯೇ ಎಂಬ ಬಗ್ಗೆ ಕಡತದಲ್ಲಿ ಯಾವ ಮಾಹಿತಿಯೂ ಇಲ್ಲವಾಗಿದೆ. ಅದೇ ರೀತಿ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ನೀಡಿದ್ದ ವರದಿಯನ್ನು ಯಾರು ಪರಿಶೀಲಿಸಿದ್ದಾರೆ ಎಂಬ ಬಗ್ಗೆ ಸಣ್ಣ ಮಾಹಿತಿಯೂ ಇಲ್ಲ.

ರೋಹಿತ್ ಚಕ್ರತೀರ್ಥ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂದು ಬಿ.ಸಿ.ನಾಗೇಶ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚನೆ ಸಂಬಂಧದ ಕೆಲ ಅಂಶಗಳು ಇದೀಗ ಮುನ್ನೆಲೆಗೆ ಬಂದಿವೆ. ಈ ಕುರಿತು ''the-file.in'' ಆರ್‌ಟಿಐ ಅಡಿಯಲ್ಲಿ ಕಚೇರಿ ಟಿಪ್ಪಣಿ ಹಾಳೆ ಮತ್ತು ದಾಖಲೆಗಳನ್ನು ಪಡೆದುಕೊಂಡಿದೆ. 6ನೇ ತರಗತಿಯ ಸಮಾಜ ವಿಜ್ಞಾನ ಭಾಗ 1ರಲ್ಲಿ ಪಾಠ ಸಂಖ್ಯೆ 7ರ ಪುಟ ಸಂಖ್ಯೆ 82 ಹಾಗೂ 83 ರಲ್ಲಿನ ವಿಷಯಾಂಶಗಳನ್ನು ಎಲ್ಲ ಏಳು ಮಾಧ್ಯಮಗಳ ಪಠ್ಯಪುಸ್ತಕ ಗಳಿಂದ ತೆಗೆದು ಹಾಕಲು ಅನುಮತಿ ಮತ್ತು 1ರಿಂದ 10ನೇ ತರಗತಿ ಸಮಾಜ ವಿಜ್ಞಾನ, ಭಾಷಾ ವಿಷಯಗಳಲ್ಲಿ ಇರಬಹುದಾದ ಸೂಕ್ಷ್ಮ ಹಾಗೂ ಆಕ್ಷೇಪಾರ್ಹ ವಿಷಯಾಂಶ ಗಳನ್ನು ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತೊಮ್ಮೆ ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಪಠ್ಯಪುಸ್ತಕ ಸಂಘವು 2020ರ ಡಿಸೆಂಬರ್ 18ರಂದು ಪ್ರಸ್ತಾವ ಸಲ್ಲಿಸಿತ್ತು.

ಇದನ್ನು ಅನುಮೋದಿಸಿದ್ದ ಹಿಂದಿನ ಸಚಿವ ಎಸ್.ಸುರೇಶ್‌ಕುಮಾರ್ ಅವರು ಸಮಿತಿ ರಚಿಸಲು ಸೂಚಿಸಿದ್ದರಲ್ಲದೇ ಈ ಸಮಿತಿಯ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರೋಹಿತ್ ಚಕ್ರತೀರ್ಥ ಇವರಿಗೆ ವಹಿಸಿ ಆದೇಶ ಹೊರಡಿಸಬೇಕು ಎಂದು ಸೂಚಿಸಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಸಚಿವರ ಸೂಚನೆಯಂತೆ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಸಂಘವು ಸಂಪರ್ಕಿಸಿತ್ತು. ಆ ನಂತರ ಚಕ್ರತೀರ್ಥ ಅವರು ಸೂಚಿಸಿದ ಮತ್ತು ಇಲಾಖೆಯ ತರಗತಿ ಶಿಕ್ಷಕರನ್ನು ಒಳಗೊಂಡಂತೆ ಒಟ್ಟು 15 ಜನ ಸಂಪನ್ಮೂಲ ವ್ಯಕ್ತಿಗಳ ಸಮಿತಿಯನ್ನು ರಚಿಸಿ ಪಟ್ಟಿ ಯನ್ನು ಸಿದ್ಧಪಡಿಸಲಾಗಿತ್ತು. ಅ ನಂತರ ಈ ಸಮಿತಿ ರಚನೆ ಕುರಿತಂತೆ ಬಿ.ಸಿ .ನಾಗೇಶ್ ಅವರು ಸಚಿವರಾದ ನಂತರ ಇದಕ್ಕೆ ಅನುಮೋದನೆ ದೊರಕಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

ಹಾಗೆಯೇ ‘ಚಕ್ರತೀರ್ಥ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ನೀಡುವ ವರದಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಬೇಕು. ಮತ್ತು ಈ ಸಮಿತಿಗೆ ಸದಸ್ಯರನ್ನು ಹೆಸರಿಸ ಲಾಗುವುದು’ ಎಂದು ಅಂದು ಸಚಿವರಾಗಿದ್ದ ಎಸ್.ಸುರೇಶ್‌ಕುಮಾರ್ ಅವರು 2020ರ ಡಿಸೆಂಬರ್ 17ರಂದು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಈ ಪತ್ರದಲ್ಲಿ ಪ್ರಸ್ತಾಪಿಸಿದಂತೆ ಪರಿಶೀಲನಾ ಸಮಿತಿ ನೀಡಿದ್ದ ವರದಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.

ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ಅಧ್ಯಾಯ 4.2ರಲ್ಲಿ ಹೊಸ ಧರ್ಮಗಳ ಉದಯ ಪಠ್ಯಭಾಗವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸುವ ಹೊಣೆಗಾರಿಕೆಯನ್ನೂ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಬೇಕು ಎಂದು ಸಚಿವ ಬಿ.ಸಿ.ನಾಗೇಶ್ ಅವರು 2022ರ ಫೆ.17ರಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿರುವುದನ್ನು ಸ್ಮರಿಸಬಹುದು.

2.5 ಕೋಟಿ ರೂ. ನಷ್ಟ

ಹೊಸಧರ್ಮಗಳ ಉದಯಕ್ಕೆ ಕಾರಣಗಳು ಮತ್ತು ಟಿಪ್ಪು ಸುಲ್ತಾನ್ ಸಾಧನೆ ಮತ್ತು ಕೊಡುಗೆ ಗಳನ್ನು ವಿವರಿಸುವ ಪಾಠಾಂಶಗಳನ್ನು ಪಠ್ಯದಿಂದ ತೆಗೆದುಹಾಕುವ ಮುನ್ನವೇ 2021-22ನೇ ಸಾಲಿಗೆ ಒಟ್ಟು 83 ಶೀರ್ಷಿಕೆಗಳ ಒಟ್ಟು 6,76,997 ಪಠ್ಯಪುಸ್ತಕಗಳನ್ನು ಮುದ್ರಿಸಲಾಗಿತ್ತು. ಇಷ್ಟೊಂದು ಸಂಖ್ಯೆಯಲ್ಲಿರುವ ಪಠ್ಯಪುಸ್ತಕ ಗಳು 2022-23ನೇ ಸಾಲಿಗೆ ಅನುಪಯುಕ್ತವಾಗಿವೆ. ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿದ ಪರಿಣಾಮ 2.5 ಕೋಟಿ ರೂ.ನಷ್ಟವಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X