Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಬಿಜೆಪಿ ಸರಕಾರ ಈ ರಾಜ್ಯವನ್ನು...

'ಬಿಜೆಪಿ ಸರಕಾರ ಈ ರಾಜ್ಯವನ್ನು ಕೊಲ್ಲುತ್ತಿದೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ25 May 2022 3:13 PM IST
share
ಬಿಜೆಪಿ ಸರಕಾರ ಈ ರಾಜ್ಯವನ್ನು ಕೊಲ್ಲುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 25: 'ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರದ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳಲು ವಿಶ್ವ ಹಿಂದೂ ಪರಿಷತ್ ನಾಯಕರು ಹಾಗೂ ಬಿಜೆಪಿ ಶಾಸಕರು ಮುಂದಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಬಿಜೆಪಿ ಸರಕಾರ ಈ ರಾಜ್ಯವನ್ನು ಕೊಲ್ಲುತ್ತಿದೆ. ಬಿಜೆಪಿಯವರು ತಮ್ಮ ನಂಬಿಕೆ, ಸ್ವಂತ ವಿಚಾರದಲ್ಲಿ ಏನಾದರೂ ಮಾಡಿಕೊಳ್ಳಲಿ. ಅವರ ವೈಯಕ್ತಿಕ ನಂಬಿಕೆ, ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಇದರಿಂದ ರಾಜ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು.

ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಸರಕಾರದಲ್ಲಿ ಅಲ್ಪಸಂಖ್ಯಾತರ ಸಚಿವಾಲಯ, ಹಿಂದೂಗಳಿಗಾಗಿ ಮುಜರಾಯಿ ಇಲಾಖೆ ಇದೆ. ಸರ್ಕಾರಿ ಅಧಿಕಾರಿಗಳು ಇದ್ದಾರೆ. ಹೀಗಾಗಿ ಸರಕಾರದ ವಿಚಾರದಲ್ಲಿ ಸಂಘಟನೆಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು..

ಇಂತಹ ವಿಚಾರದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ನಾವು ಹೋರಾಡುತ್ತೇವೆ ಎಂದು ನನಗೆ ಅನೇಕ ಕರೆಗಳು ಬರುತ್ತಿವೆ. ಇದರಿಂದ ಶಾಂತಿ ಸುವ್ಯವಸ್ಥೆಗೆ ಭಂಗವಾಗುತ್ತದೆ, ಹೀಗಾಗಿ ಈ ವಿಚಾರಕ್ಕೆ ಹೋಗಬೇಡಿ ಎಂದು ನಾನೇ ಸಮಾಧಾನ ಮಾಡುತ್ತಿದ್ದೇನೆ.

ಭವಿಷ್ಯ ಕೇಳುವವರು, ಶಕುನ ಕೇಳುವವರು, ಜ್ಯೋತಿಷ್ಯ ಕೇಳುವವರಿಗೆ ನಾವು ಅಡ್ಡಿ ಮಾಡುವುದಿಲ್ಲ. ಇದೆಲ್ಲವೂ ವೈಯಕ್ತಿಕ ವಿಚಾರವಾಗಿದ್ದು, ಸಾರ್ವಜನಿಕ ವಿಚಾರವಲ್ಲ. ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಾನು ಖಂಡಿಸುತ್ತೇನೆ.

ಈ ವಿಚಾರದಲ್ಲಿ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಹೈಕೋರ್ಟ್ ನೀಡಿರುವ ಸೂಚಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,  'ನಾವು ಚುನಾವಣೆಯನ್ನು ಎಂದೂ ಬೇಡ ಎನ್ನುವುದಿಲ್ಲ. ಆದರೆ ಮೊದಲು ಸಾಮಾಜಿಕ ನ್ಯಾಯ ಸಿಗಬೇಕು. ಸಂವಿಧಾನದ ಆಶಯದಂತೆ ಜನರಿಗೆ ಅಧಿಕಾರ ಕೊಡಬೇಕು. ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯಕ್ಕೆ ತೊಂದರೆ ಆಗಬಾರದು. ಇದು ಸರ್ಕಾರದ ಜವಾಬ್ದಾರಿ. ನ್ಯಾಯಾಲಯ ಚುನಾವಣೆ ನಡೆಸಿ ಎಂದು ಹೇಳಿದೆ. ಆದರೆ ಸಾಮಾಜಿಕ ನ್ಯಾಯ ಕಡೆಗಣಿಸಿ ಎಂದು ಹೇಳಿಲ್ಲ ಎಂದರು.

ಮೇಕೆದಾಟು ಹೋರಾಟದಲ್ಲಿ ನಿಯಮ ಉಲ್ಲಂಘನೆ ಕುರಿತು ನೋಟಿಸ್ ಜಾರಿ ಬಗ್ಗೆ ಕೇಳಿದ ಪ್ರಶ್ನೆಗೆ, 'ನಾವು ನ್ಯಾಯಾಲಯಕ್ಕೆ ಗೌರವ ನೀಡಬೇಕು, ಖಂಡಿತ ನೀಡುತ್ತೇವೆ. ಆದರೆ ಕೇವಲ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಬಿಜೆಪಿಯವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಸಚಿವರ ಕಾರ್ಯಕ್ರಮಗಳು ಸರ್ಕಾರದ ಕಾರ್ಯಕ್ರಮ ಹಾಗೂ ಬಿಜೆಪಿ ನಾಯಕರ ಹುಟ್ಟುಹಬ್ಬ ವಿರುದ್ಧ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದರು.

ಪಠ್ಯಕ್ರಮ ಪರಿಷ್ಕರಣೆ ಗೊಂದಲ ಕುರಿತ ಪ್ರಶ್ನೆಗೆ ,'ಸರ್ಕಾರ ರಾಜಕೀಯ ಅಜೆಂಡಾವನ್ನು ಪಠ್ಯಕ್ರಮದಲ್ಲಿ ತರಲು ಪ್ರಯತ್ನಿಸುತ್ತಿದೆ. ಇತಿಹಾಸ ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಇತಿಹಾಸವನ್ನು ಯಾರು ಬದಲಿಸಲು ಸಾಧ್ಯವಿಲ್ಲ. ಎಲ್ಲ ಪ್ರಯತ್ನಗಳು ಕೆಲಕಾಲ ಮಾತ್ರ. ದೇಶದ ಯಾವುದೇ ರಾಜ್ಯಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲು ಸಾಧ್ಯವಾಗಿಲ್ಲ. ಆದರೆ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ತನ್ನ ಪಕ್ಷ ಹಾಗೂ ಸಂಘಟನೆಯ ನಾಯಕರ ವಿಚಾರಗಳನ್ನು ಮಕ್ಕಳ ತಲೆಗೆ ತುಂಬಲು ಪ್ರಯತ್ನ ಮಾಡುತ್ತಿದೆ. ಕೆಲವರನ್ನು ದೇಶಕ್ಕಾಗಿ ಸ್ವಾತಂತ್ರ ತಂದುಕೊಟ್ಟವರು ಎಂದು ತಪ್ಪಾಗಿ ಬಿಂಬಿಸುತ್ತಿರುವುದು ಅಪರಾಧವಾಗಿದೆ. ಸರ್ಕಾರದ ಈ ತಪ್ಪಿಗೆ ಜನರೇ ಮುಂದಿನ ದಿನಗಳಲ್ಲಿ ಶಿಕ್ಷೆ ನೀಡುತ್ತಾರೆ' ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X