ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿಗೆ ಆಗಮನ

ಮಂಗಳೂರು : ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ.
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಂದ ತೆರವಾದ ಸ್ಥಾನಕ್ಕೆ ಇತ್ತೀಚೆಗೆ ನಿಯುಕ್ತಿಗೊಂಡಿದ್ದ ಅಲೋಕ್ ಕುಮಾರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ನಗರ ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಹರಿರಾಂ ಶಂಕರ್ ಜೊತೆ ಚರ್ಚೆ ನಡೆಸಿದರು.
ನೂತನ ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದ.ಕ.ಜಿಲ್ಲೆಗೆ ಅಲೋಕ್ ಕುಮಾರ್ ಮೊದಲ ಭೇಟಿ ಇದಾಗಿದೆ. ಗುರುವಾರ ಅವರು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.