ಮಣಿಪಾಲ; ಡಿವೈಡರ್ಗೆ ಬೈಕ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು
ಮಣಿಪಾಲ : ಬೈಕೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟು, ಮತ್ತೋರ್ವ ಗಂಭೀರ ವಾಗಿ ಗಾಯಗೊಂಡ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಬಳಿ ಇಂದು ಸಂಜೆ ನಡೆದಿದೆ.
ಮೃತರನ್ನು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕೋಟೇಶ್ವರ ನಿವಾಸಿ ಶೋಧನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ ಕಾಲೇಜಿನ ವಿದ್ಯಾರ್ಥಿ ಆಡ್ರಿನ್ ವಾಸ್ ಎಂಬವರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.
Next Story