ಯುವತಿ ಆತ್ಮಹತ್ಯೆ
ಕುಂದಾಪುರ : ಎರಡು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಉಪ್ಪಿನಕುದ್ರು ನಿವಾಸಿ ಶಿಲ್ಪಾದೇವಾಡಿಗ(25) ಎಂಬವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಶಿಲ್ಪಾ ಕಳೆದ ಮೂರು ವರ್ಷಗಳಿಂದ ತಲ್ಲೂರಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಮೇ 23 ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯನ್ನು ಮಣಿಪಾಲ ಆಸ್ಪತ್ರೆ ದಾಖಲಿಸ ಲಾಗಿತ್ತು. ಆದರೆ ಈಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಂದಾಪುರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Next Story