Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ...

ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ: ಸೈಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್

ಎಸ್ಕೆಎಸ್ಸೆಸ್ಸೆಫ್‌ನಿಂದ ‘ಸಹಬಾಳ್ವೆ ಮರಳಿ ಪಡೆಯಲು’ ಘೋಷವಾಕ್ಯದಡಿ ಸೌಹಾರ್ದ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ26 May 2022 10:06 PM IST
share
ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ: ಸೈಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್

ಮಂಗಳೂರು : ಯುದ್ಧ ಮತ್ತು ಸಂಘರ್ಷವು ಇಸ್ಲಾಮಿನ ಸಿದ್ಧಾಂತವಲ್ಲ. ಧಾರ್ಮಿಕ ನಂಬಿಕೆಯೂ ಅಲ್ಲ. ಅದನ್ನು ಯಾವೊಬ್ಬ ಮುಸ್ಲಿಮನೂ ಅಂಗೀಕರಿಸುವುದಿಲ್ಲ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾದ ಅಧ್ಯಕ್ಷ ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು.

ದ.ಕ.ಜಿಲ್ಲಾ ಎಸ್ಕೆಎಸ್ಸೆಸ್ಸೆಫ್ ಸಮಿತಿಯ ವತಿಯಿಂದ ‘ಸಹಬಾಳ್ವೆ ಮರಳಿ ಪಡೆಯಲು’ ಎಂಬ ಘೋಷವಾಕ್ಯ ದೊಂದಿಗೆ ನಗರದ ಪುರಭವನದಲ್ಲಿ ಗುರುವಾರ ನಡೆದ ಸೌಹಾರ್ದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುರ್‌ಆನಿನ ಅಧ್ಯಾಯಗಳನ್ನು ದುರ್ವ್ಯಾಖ್ಯಾನಗೊಳಿಸಿ ಇಸ್ಲಾಮನ್ನು ಕೋಮುವಾದಿಗಳ ಮತ್ತು ಭಯೋತ್ಪಾದಕರ ಧರ್ಮವನ್ನಾಗಿ ಬಿಂಬಿಸಲಾಗುತ್ತಿದೆ. ಧಾರ್ಮಿಕ ಅರಿವಿನ ಕೊರತೆಯೇ ಕೋಮುವಾದಕ್ಕೆ ಮೂಲ ಕಾರಣವಾಗಿದೆ. ದೇಶದ ಅಭಿವೃದ್ಧಿ ಹಾಗೂ ಏಕತೆಗೆ ಕೋಮುವಾದವು ಬಹಳ ಅಪಾಯಕಾರಿ ಎಂಬುದನ್ನು ಪ್ರತಿಯೊಬ್ಬ ಮುಸಲ್ಮಾನನೂ ತಿಳಿದುಕೊಂಡಿದ್ದಾನೆ. ಕೆಲವೊಂದು ನಾಮಧಾರಿಗಳು ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಕೋಮುವಾದವನ್ನು ಬಳಸಿದರೆ ಅದಕ್ಕೆ ಧರ್ಮದ ಸಿದ್ಧಾಂತ ಅಥವಾ ಧಾರ್ಮಿಕ ಗುರುಗಳು ಜವಾಬ್ದಾರರಲ್ಲ. ಆ ಸಂದೇಶವನ್ನು ಒಕ್ಕೊರಲಿನಿಂದ ಸಾರುವುದಕ್ಕಾಗಿ ಸರ್ವ ಧರ್ಮೀಯ ಗುರುಗಳು ಇಂದಿಲ್ಲಿ ಒಗ್ಗಟ್ಟಾಗಿ ಸೇರಿದ್ದೇವೆ ಎಂದು ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಙಳ್ ನುಡಿದರು.

ದೇವಾಲಯಗಳನ್ನು ಧ್ವಂಸಗೊಳಿಸಿ ಮಸೀದಿ ನಿರ್ಮಿಸಲಾಗಿದೆ ಎಂಬ ಆರೋಪಕ್ಕೆ ಆಧಾರವಿಲ್ಲ. ಭಾರತಕ್ಕೆ ಇಸ್ಲಾಮ್ ಧರ್ಮ ಆಗಮಿಸಿದ ಸಂದರ್ಭದಲೇ ಇಲ್ಲಿನ ಶಿಲ್ಪಿಗಳು ದೇವಾಲಯಗಳ ವಾಸ್ತುಶೈಲಿಯಲ್ಲೇ ಮಸೀದಿಯನ್ನು ನಿರ್ಮಿಸಿದ್ದಾರೆ. ಅದನ್ನೀಗ ಕೆಲವರು ದೇವಸ್ಥಾನವೆಂದು ವಾದಿಸುವುದು ಖಂಡನೀಯ. ವೈವಿದ್ಯತೆಯಲ್ಲಿ ಏಕತೆ ಮತ್ತು ಧಾರ್ಮಿಕ ಸಾಮರಸ್ಯದಿಂದಲೇ ಭಾರತದ ಅಸ್ತಿತ್ವ ಅಡಗಿದೆ. ಭಾರತ-ಪಾಕ್ ಯುದ್ಧ ನಡೆದಾಗ ಭಾರತೀಯ ಮುಸ್ಲಿಮರು ಭಾರತದ ಜೊತೆ ನಿಂತಿದ್ದಾರೆ. ಭವಿಷ್ಯದಲ್ಲೂ ಭಾರತದ ಜೊತೆ ನಿಲ್ಲಲಿದ್ದಾರೆ. ಅದರಲ್ಲಿ ಯಾವುದೇ ಸಂಶಯಬೇಡ. ವಾಸಿಸುವ ನೆಲದ ಸಂಸ್ಕೃತಿಯನ್ನು ಗೌರವಿಸುವುದು ಹಾಗೂ ಪ್ರಜಾಸತ್ತಾತ್ಮಕ ನಿಯಮಗಳನ್ನು ಪಾಲಿಸುವುದು ಧಾರ್ಮಿಕ ಕರ್ತವ್ಯವಾಗಿದೆ ಎಂದು ಸೈಯ್ಯದ್ ಮುಹ್ಮಮದ್ ಜಿಫ್ರಿ ಮುತ್ತುಕೋಯ ತಂಙಳ್ ತಿಳಿಸಿದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಫೈಝಿ ವೆಳ್ಳಾಯಿಕ್ಕೋಡು ವಹಿಸಿದ್ದರು. ಇಬ್ರಾಹೀಂ ಬಾಖವಿ ಕೆ.ಸಿ.ರೋಡ್ ದುಆಗೈದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ಮಾಜಿ ಸಚಿವ ರಮಾನಾಥ ರೈ ಶುಭ ಹಾರೈಸಿದರು. ಜಂಇಯ್ಯತುಲ್ ಖುತ್ಬಾದ ಜಿಲ್ಲಾಧ್ಯಕ್ಷ ದ.ಕ. ಎಸ್.ಬಿ.ದಾರಿಮಿ ದಿಕ್ಸೂಚಿ ಭಾಷಣ ಮಾಡಿದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಸ್ವಾಗತಿಸಿದರು.

ವೇದಿಕೆಯಲ್ಲಿ ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಸೈಯದ್ ಅಮೀರ್ ತಂಙಳ್ ಕಿನ್ಯ, ಫಕ್ರುದ್ದೀನ್ ತಂಙಳ್, ಹಾಶಿರಲಿ ತಂಙಳ್ ಪಾಣಕ್ಕಾಡ್, ಎಸ್‌ವೈಎಸ್ ಕೇರಳ ರಾಜ್ಯ ಕಾರ್ಯದರ್ಶಿ ಹಮೀದ್ ಫೈಝಿ ಅಂಬಲಕ್ಕಡವು,  ಎಸ್ಕೆಎಸ್ಸೆಸ್ಸೆಫ್ ಕೇರಳ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ಪಂದಲ್ಲೂರು, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ಉಸ್ಮಾನುಲ್ ಫೈಝಿ ತೋಡಾರು, ತಾಜುದ್ದೀನ್ ದಾರಿಮಿ, ಸೈಯದ್ ಬಾಷಾ ತಂಙಳ್, ತಾಜುದ್ದೀನ್ ರಹ್ಮಾನಿ, ಹಾರಿಸ್ ಕೌಸರಿ, ಮುಸ್ತಫಾ ಹಾಜಿ ಕೆಂಪಿ, ಐ. ಮೊಯ್ದಿನಬ್ಬ ಹಾಜಿ ಎಂ. ಎಸ್.ಮುಹಮ್ಮದ್, ಕೆ. ಅಶ್ರಫ್, ಮುಹಮ್ಮದ್ ಮೋನು, ಕೆ.ಕೆ. ಶಾಹುಲ್ ಹಮೀದ್, ಅಬ್ಬಾಸ್ ಅಲಿ ಬೋಳಂತೂರು, ಮುಹಮ್ಮದ್ ಕುಂಜತ್ತಬೈಲ್, ಇಕ್ಬಾಲ್ ಮುಲ್ಕಿ, ಯು.ಪಿ. ಇಬ್ರಾಹೀಂ., ಸಿದ್ದೀಕ್ ಅಬ್ದುಲ್ ಖಾದರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಶೀದ್ ರಹ್ಮಾನಿ ಕಾರ್ಯಕ್ರಮ ನಿರೂಪಿಸಿದರು. ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ವಂದಿಸಿದರು.

"ಮನುಷ್ಯರನ್ನು ಮಾತ್ರವಲ್ಲ ಪ್ರಾಣಿ, ಪಕ್ಷಿಗಳ ಮೇಲೂ ದಯೆ, ಪ್ರೀತಿ, ಕರುಣೆ ತೋರಿದ ಪ್ರವಾದಿ ಪೈಗಂಬರ್‌ರ ಅನುಯಾಯಿಗಳಾದ ಮುಸ್ಲಿಮರು ಶಾಂತಿಯ ಪ್ರತಿಪಾದಕರು ಎಂಬುದು ಜಗತ್ತಿಗೆ ತಿಳಿದ ವಿಚಾರವಾಗಿದೆ. ಶಾಂತಿ, ನೆಮ್ಮದಿ ಇಲ್ಲದ ಬದುಕು ಬದುಕೇ ಅಲ್ಲ. ನಾಡಿನಲ್ಲಿ ಇಂದು ಸೌಹಾರ್ದದ ಕೊರತೆ ನೀಗಿಸಬೇಕಿದೆ. ಈವತ್ತು ನಮಗೆ ಕಲ್ಲು ಎಸೆದವರೇ ನಾಳೆ ಹೂವನ್ನೂ ಚೆಲ್ಲಬಹುದು".

- ಡಾ. ವಿಜಯಾನಂದ ಸ್ವಾಮೀಜಿ
ಸರ್ವಧರ್ಮ ಸಮನ್ವಯ ಸೌಹಾರ್ದ ಪೀಠ ಚಿತ್ರದುರ್ಗ

"ಕಣ್ಣಿಗೆ ಕಾಣುವ ಮನುಷ್ಯರನ್ನು ಪ್ರೀತಿಸದವ ಕಣ್ಣಿಗೆ ಕಾಣದ ದೇವರನ್ನು ಪ್ರೀತಿಸುತ್ತಾನೆ ಎಂದರೆ ಹೇಗೆ ನಂಬಲು ಸಾಧ್ಯ ಎಂದು ಪ್ರಶ್ನಿಸುವಂತಹ ಕಾಲಘಟ್ಟದಲ್ಲಿ ನಾವಿದ್ದೀವೆ. ಧರ್ಮಕ್ಕಾಗಿ ಸಾಯುವವರು ಧರ್ಮಕ್ಕಾಗಿ ಬದುಕಲು ಕಲಿಯದಿರುವುದು ಕೂಡ ವಿಪರ್ಯಾಸವಾಗಿದೆ. ಕೆಟ್ಟವರಿಂದ ಯಾವತ್ತೂ ದೇಶ ಹಾಳಾಗದು. ಒಳ್ಳೆಯವರು ಎಂದು ಬಿಂಬಿಸುತ್ತಾ ಅನ್ಯಾಯದ ವಿರುದ್ಧ ಮೌನವಾಗುವವರಿಂದಲೇ ದೇಶ ಹಾಳಾಗಲಿದೆ. ಆ ಪ್ರಜ್ಞೆಯು ಪ್ರತಿಯೊಬ್ಬರಲ್ಲೂ ಇರಬೇಕಿದೆ. ಹಾಗಾಗಿ ಅನ್ಯಾಯವನ್ನು ಮೌನವಾಗಿ ಸಹಿಸದೆ ಹೋರಾಟ ಮಾಡಬೇಕಿದೆ".
-ರೆ.ಫಾ.ಕ್ಲಿಫರ್ಡ್ ಫೆರ್ನಾಂಡಿಸ್
ಧರ್ಮಗುರು, ಮಂಗಳೂರು ಕೋರ್ಡೆಲ್ ಚರ್ಚ್

"ಶಾಂತಿಯ ತೋಟದಲ್ಲಿ ಬಾಂಧವ್ಯ ಇಲ್ಲ ಯಾಕೆ ಎಂಬುದನ್ನು ನಾವು ಪರಸ್ಪರ ಪ್ರಶ್ನಿಸಿಕೊಳ್ಳಬೇಕಿದೆ. ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಯಾವತ್ತೂ ಅಂತರವಿರಬಾರದು. ಸಂಕುಚಿತ ಭಾವನೆ ಬಿಟ್ಟು ಎಲ್ಲರೂ ನಮ್ಮವರು ಎಂಬ ಭಾವನೆ ಮೂಡುವ ಕೆಲಸ ಆಗಬೇಕಿದೆ.  ಹಿಂದೂ ಮತ್ತು ಮುಸ್ಲಿಮರು ಪ್ರತ್ಯೇಕವಾಗಿರಬೇಕು ಎಂದು ರಾಜಕಾರಣಿಗಳು ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ಹಾಗಾಗಿ ಎಲ್ಲಾ ಧರ್ಮದ ಗುರುಗಳು ಸೂಜಿಯಿಂದ ಹೊಲಿಯುವ ಕೆಲಸ ಮಾಡಬೇಕು. ಜೊತೆಗೆ ಸೂಜಿಯಿಂದ ಚುಚ್ಚುವವರ ವಿರುದ್ಧ ಹೋರಾಟ ಮಾಡಬೇಕು".
- ಡಾ.ಜಯಬಸವಾನಂದ ಸ್ವಾಮಿ
ವಿಶ್ವ ಧರ್ಮ ಪೀಠ, ಜಯ ಬಸವ ತಪೋವನ, ಚಿಕ್ಕಮಗಳೂರು

"ನಾನು ಹಿಜಾಬನ್ನು ಶಿರವಸ್ತ್ರ ಎಂದು ಉಲ್ಲೇಖಿಸುತ್ತೇನೆ. ಆ ಶಿರವಸ್ತ್ರವನ್ನು ನನ್ನ ಅಜ್ಜಿ ಮಾತ್ರವಲ್ಲ ನನ್ನ ಮನೆಯ ಆಸುಪಾಸಿನ ಅನೇಕ ಮಂದಿಯೂ ಧರಿಸುತ್ತಿದ್ದರು. ರಾಜಕೀಯ ಕಾರಣಕ್ಕಾಗಿ ಅದೇ ಶಿರವಸ್ತ್ರವನ್ನು ‘ಹಿಜಾಬ್’ ಹೆಸರಿನಲ್ಲಿ ರಾಜ್ಯಾದ್ಯಂತ ಸಮಸ್ಯೆಯನ್ನು ಹುಟ್ಟು ಹಾಕಲಾಗುತ್ತದೆ. ಪ್ರಜ್ಞಾವಂತರಾದ ನಾವು ಅದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ".
ಸುಧೀರ್ ಕುಮಾರ್ ಮರೋಳ್ಳಿ
ನ್ಯಾಯವಾದಿ, ಸಾಮಾಜಿಕ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X