ಕಾಶ್ಮೀರದಲ್ಲಿ ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾದ ಇಬ್ಬರು ಸೇರಿದಂತೆ 4 ಉಗ್ರರ ಹತ್ಯೆ: ಪೊಲೀಸರು
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಹಾಗೂ ಶ್ರೀನಗರ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಸೇರಿದಂತೆ ನಾಲ್ವರು ಎಲ್ಇಟಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ತಡರಾತ್ರಿ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದ ಅಗನ್ಹಂಜಿಪೋರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಒಂದು ದಿನದ ಹಿಂದೆ ಬುದ್ಗಾಮ್ ಜಿಲ್ಲೆಯಲ್ಲಿ ಟಿವಿ ಕಲಾವಿದೆ ಅಮ್ರೀನ್ ಭಟ್ ಅವರನ್ನು ಕೊಂದ ಇಬ್ಬರು ಭಯೋತ್ಪಾದಕರು ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ ಎಂದು ಅವರು ಹೇಳಿದರು.
ಶ್ರೀನಗರದ ಸೌರಾ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಇಬ್ಬರು ಎಲ್ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Both killed newly joined local #terrorists identified as Shahid Mushtaq Bhat R/O Hafroo Chadoora #Budgam & Farhan Habib R/O Hakripora #Pulwama. They had #killed TV artist on the instruction of LeT Cmdr Lateef. 01 AK 56 rifle, 4 magazines and a pistol recovered: IGP Kashmir https://t.co/VeoHZRkdEO
— Kashmir Zone Police (@KashmirPolice) May 26, 2022