Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 5 ಲಕ್ಷ ಕೋ.ರೂ. ಬಂಡವಾಳ...

ರಾಜ್ಯದಲ್ಲಿ 5 ಲಕ್ಷ ಕೋ.ರೂ. ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ27 May 2022 11:47 AM IST
share
ರಾಜ್ಯದಲ್ಲಿ 5 ಲಕ್ಷ ಕೋ.ರೂ. ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಮೇ 27: ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ  5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಈಗಾಗಲೇ ನಿಗದಿಯಾಗಿರುವಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ  ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ  ಸ್ಥಳೀಯರಿಗೆ ಉದ್ಯೋಗಾವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು.

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

ನವೆಂಬರ್ ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು  ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ  ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X