Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 65 ಸಾವಿರ ಕೋಟಿ ರೂ.ಬಂಡವಾಳ...

ರಾಜ್ಯದಲ್ಲಿ 65 ಸಾವಿರ ಕೋಟಿ ರೂ.ಬಂಡವಾಳ ಹೂಡಲು ಹಲವು ಕಂಪೆನಿಗಳ ಆಸಕ್ತಿ: ಸಿಎಂ ಬೊಮ್ಮಾಯಿ

''25 ಕಂಪೆನಿಗಳ ಜತೆ ಮಾತುಕತೆ ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸಿದೆ''

ವಾರ್ತಾಭಾರತಿವಾರ್ತಾಭಾರತಿ27 May 2022 7:14 PM IST
share
ರಾಜ್ಯದಲ್ಲಿ 65 ಸಾವಿರ ಕೋಟಿ ರೂ.ಬಂಡವಾಳ ಹೂಡಲು ಹಲವು ಕಂಪೆನಿಗಳ ಆಸಕ್ತಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 27: ‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಹಲವು ಕಂಪೆನಿಗಳು ಮುಂದೆ ಬಂದಿವೆ. ಅಂದಾಜು 65 ಸಾವಿರ ಕೋಟಿ ರೂ.ಬಂಡವಾಳ ಹೂಡಿಕೆಗೆ ಕಂಪೆನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನದಲ್ಲಿ ದಾವೋಸ್ ಪ್ರವಾಸದಿಂದ ಹಿಂದಿರುಗಿದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ಮೇಲೆ ವಿಶ್ವಾಸವನ್ನು ಮೂಡಿಸಿದೆ' ಎಂದು ನುಡಿದರು.

‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವ ಆರ್ಥಿಕ ಶೃಂಗಸಭೆ ಫಲಪ್ರದವಾಗಿದೆ. ಕರ್ನಾಟಕದಲ್ಲಿ ಒಟ್ಟು 65 ಸಾವಿರ ಕೋಟಿ ರೂ.ಬಂಡವಾಳ ಹೂಡಿಕೆಗೆ ವಿಶ್ವ ಪ್ರಮುಖ ಸಂಸ್ಥೆಗಳು ಬದ್ಧತೆ ತೋರಿದ್ದು, 25 ಕಂಪೆನಿಗಳೊಂದಿಗೆ ಚರ್ಚಿಸಲಾಗಿದೆ. ದೇಶವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರು ನೋಡುತ್ತಿದೆ. ಕರ್ನಾಟಕ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದರು. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದರು. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿ ಪ್ರಮುಖ ಕ್ಷೇತ್ರದ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಹೂಡಿಕೆಯಲ್ಲಿ ಆಸಕ್ತಿ ತೋರಿದರು. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು' ಎಂದು ಅವರು ವಿವರ ನೀಡಿದರು.

‘ಕೋವಿಡ್ ನಂತರದ ದೇಶದ ಆರ್ಥಿಕತೆಯ ಬಲವರ್ಧನೆಯಲ್ಲಿ ಕರ್ನಾಟಕದ ಪಾತ್ರ ವಹಿಸಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವ ಸಂಸ್ಥೆಗಳ ಉದ್ದಿಮೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಮೂಲಸೌಕರ್ಯ, ಉದ್ದಿಮೆ ಸ್ಥಾಪನೆಗೆ ಸರಳೀಕೃತ ಪ್ರಕ್ರಿಯೆಗಳು, ಈಸ್ ಆಫ್ ಡೂಯಿಂಗ್ ಬಿಸನೆಸ್ ನೀತಿಯ ಮೂಲಕ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

‘ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು 50 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ. ಲುಲು ಗ್ರೂಪ್ ರಾಜ್ಯದಲ್ಲಿ 2 ಸಾವಿರ ಕೋಟಿ ರೂ.ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ' ಎಂದು ಅವರು ತಿಳಿಸಿದರು.

‘ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್, ಅಬ್ ಇನ್ಬೇವ್, ದಸ್ಸಾಲ್ಟ್ ಸಿಸ್ಟಂ, ನಸ್ಟ್ಲೆ, ಆರ್ಸೆಲಾರ್ ಮಿತ್ತಲ್ ಸಂಸ್ಥೆ ಭಾರ್ತಿ ಎಂಟರ್‍ಪ್ರೈಸಸ್, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ. ಇದಲ್ಲದೆ ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸ್‍ನ್ ಕಂಟ್ರೋಲ್ಸ್, ಹನಿವೆಲ್, ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್, ಆಕ್ಸಿಸ್ ಬ್ಯಾಂಕ್ ಸಂಸ್ಥೆಗಳು ರಾಜ್ಯದ ವಿವಿಧ ವಲಯಗಳಲ್ಲಿ ಹೂಡಿಕೆ ಅವಕಾಶ ಬಗ್ಗೆ ಆಸಕ್ತಿ ತೋರಿಸಿವೆ' ಎಂದು ಅವರು ಮಾಹಿತಿ ನೀಡಿದರು.

‘ಸರಕಾರ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹಮ್ಮಿಕೊಂಡಿರುವ ಯೋಜನೆಯಂತೆ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲಸೌಲಭ್ಯ ನೀಡಲು ಆಕ್ಸಿಸ್ ಬ್ಯಾಂಕ್ ಸಂಸ್ಥೆಗೆ ಆಂಕರ್ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುವಂತೆ ಕೋರಲಾಗಿದೆ. ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮಿಟ್‍ನಲ್ಲಿ ಭಾಗವಹಿಸಲು ಪ್ರಮುಖ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ' ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ವಸತಿ ಸಚಿವ ವಿ.ಸೋಮಣ್ಣ, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

‘ಹೂಡಿಕೆ ಆಕರ್ಷಿಸುವಲ್ಲಿ ರಾಜ್ಯವನ್ನು ಆಂಧ್ರಪ್ರದೇಶ ಹಿಂದಿಕ್ಕಿಲ್ಲ. ದಾವೋಸ್‍ನಲ್ಲಿ ಸರಕಾರದ ಜತೆ ಒಪ್ಪಂದ ಮಾಡಿಕೊಂಡ ಮತ್ತು ಆಸಕ್ತಿ ತೋರಿಸಿರುವ ಕಂಪೆನಿಗಳ ಹೂಡಿಕೆಯ ಪ್ರಮಾಣ ಒಟ್ಟು ಸೇರಿಸಿದರೆ 1 ಲಕ್ಷ ಕೋಟಿ ರೂ. ಗಳಿಗೂ ಅಧಿಕ ಹೂಡಿಕೆ ರಾಜ್ಯಕ್ಕೆ ಬರಲಿದೆ. ಕರ್ನಾಟಕವನ್ನು ಆಂಧ್ರಪ್ರದೇಶದೊಂದಿಗೆ ಹೋಲಿಸಲು ಸಾಧ್ಯವಿಲ್ಲ. ಬೆಂಗಳೂರು ಅಂತರರಾಷ್ಟ್ರೀಯ ನಗರ. ಇಲ್ಲಿ ಹೂಡಿಕೆ ಮಾಡಲು ಸಹಿ ಮಾಡಿರುವ ಕಂಪೆನಿಗಳೂ ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕಂಪೆನಿಗಳು. 65 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದಗಳಾಗಿದ್ದು, ಇನ್ನೂ ಅಷ್ಟೇ ಮೊತ್ತದ ಹೂಡಿಕೆಗೆ ಕಂಪೆನಿಗಳು ಆಸಕ್ತಿ ತೋರಿಸಿವೆ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X