Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈ ಹಿಂದಿನ ಪಠ್ಯಪುಸ್ತಕ ಶೀಘ್ರವೇ...

ಈ ಹಿಂದಿನ ಪಠ್ಯಪುಸ್ತಕ ಶೀಘ್ರವೇ ಶಾಲೆಗಳಿಗೆ ಪೂರೈಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 May 2022 7:21 PM IST
share

ಮಂಗಳೂರು : ಸರಕಾರ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯನ್ನು ರದ್ದುಗೊಳಿಸಿ ಈ ಹಿಂದೆ ಇದ್ದಂತಹ ಪಠ್ಯ ಪುಸ್ತಕಗಳನ್ನು ರಾಜ್ಯದ ಎಲ್ಲ ಶಾಲೆಗಳಿಗೆ ಪೂರೈಸಬೇಕೆಂದು  ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಮುಹಮ್ಮದ್ ಅಸ್ಲಮ್  ಒತ್ತಾಯಸಿದ್ದಾರೆ.

ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡು ಈಗಾಗಲೆ ೨೦ದಿನಗಳು ಗತಿಸಿವೆ. ಸರ್ಕಾರ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ಪೂರೈಸದೆ ಮಕ್ಕಳ ಶೈಕ್ಷಣಿಕ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸುತ್ತಿದೆ. ಪಠ್ಯ ಪುಸ್ತಕ ಪರಿಷ್ಕರಣೆ ಎಂಬ ಪ್ರಹಸನವು ಗೊಂದಲದ ಗೂಡಾಗಿದ್ದು ಅನರ್ಹ ವ್ಯಕ್ತಿಗಳು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಹೊಣೆಗಾರಿಕೆಯನ್ನು ಹೊತ್ತು ಮಕ್ಕಳ ಮಾನಸಿಕತೆಯನ್ನು ಅರಿಯದೆ ಅವೈಜ್ಞಾನಿಕ ರೀತಿಯಲ್ಲಿ ಪಠ್ಯಪುಸ್ತಕಗಳ ಮೂಲಕ ಮೂಢನಂಬಿಕೆಗಳನ್ನು ಹೇರಲು ಪ್ರಯತ್ನಿಸುತ್ತಿದ್ದಾರೆಂದು  ಮುಹಮ್ಮದ್ ಅಸ್ಲಮ್  ಪ್ರಕಟನೆಯಲ್ಲಿ ಆರೋಪಿಸಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಘಟಕದ ಶೈಕ್ಷಣಿಕ ವಿಭಾಗವು ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿ ರುವ ಬೆಳೆವಣೆಗೆಗಳ ಕುರಿತಂತೆ ಗಂಭೀರವಾಗಿ ಚಿಂತನೆ ನಡೆಸಿದ್ದು ಕೂಡಲೇ ಈ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಪಠ್ಯಪುಸ್ತಕಗಳು ಒಂದು ಪೀಳಿಗೆಯನ್ನೇ ರೂಪಿಸುತ್ತವೆ. ಸದ್ಯ ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ನ ಬೆಳವಣೆಗಳು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆತಂಕಕ್ಕೆ ದೂಡಿದ್ದು ಮಕ್ಕಳ ಮನಸ್ಸಿನಲ್ಲಿ ಕೊಳಕು ತುಂಬು ವಂತಹ ಪ್ರಯತ್ನಗಳಿಂದಾಗಿ ಮುಂದಿನ ಪೀಳಿಗೆಯು ಯಾವ ರೀತಿ ದೇಶ ಮತ್ತು  ಸಮಾಜವನ್ನು ರಕ್ಷಿಸಬಲ್ಲದು ಎಂಬ ಭಯವನ್ನು ಹುಟ್ಟುವಂತೆ ಮಾಡಿದೆ. ಪಠ್ಯಪುಸ್ತಕಗಳು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ನಂಬಿಕೆ, ಪರಸ್ಪರ ಗೌರವ, ಮಾನವ ಹಕ್ಕುಗಳು, ಮಕ್ಕಳ ಹಕ್ಕುಗಳು, ಮಾನವೀಯ ಮೌಲ್ಯಗಳು ಒಟ್ಟಾರೆಯಾಗಿ ಬಹುತ್ವ ಭಾರತದ ಕಲ್ಪನೆ ಹೇಗಿರಬೇಕು, ಬಹುತ್ವದದೊಂದಿಗೆ ನಾವು ಹೇಗೆ ಬದುಕಬೇಕು ಎಂಬ ವಿಷಯಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವಂತಹ ಪ್ರಯತ್ನಗಳು ಪಠ್ಯಪುಸ್ತಕಗಳಿಂದಾಗಬೇಕು. ಆದರೆ ಸದ್ಯದ ರಾಜ್ಯದಲ್ಲಿ ಉಂಟಾ ಗುತ್ತಿರುವ ಬೆಳವಣೆಗೆಯನ್ನು ಕಂಡರೆ, ಮೇಲೆ ತಿಳಿಸಿದ ಮೌಲ್ಯಗಳ ಕಡೆಗೆ ಒತ್ತು ನೀಡದೇ, ಬಲಪಂಥೀಯ, ಕೋಮುದ್ವೇಷ, ಸಮಾಜ ಒಡೆಯುವ ಮತ್ತು ಪರಸ್ಪರಲ್ಲಿ ಅಪನಂಬಿಕೆ ಮೂಡಿಸುವ ವಿಷಯಗಳು ಪಠ್ಯಪುಸ್ತಕ ಗಳಲ್ಲಿ ಸೇರ್ಪಡೆಗೊಳ್ಳುತ್ತಿರುವುದು ದೇಶದ ಭವಿಷ್ಯ ಅಂಧಕಾರದೆಡೆಗೆ ಸಾಗುತ್ತಿರುವ ದ್ಯೋತಕವಾಗಿದೆ.

ಆದ್ದರಿಂದ ಸರಕಾರ ಕೂಡಲೇ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಟ್ಟು ಈ ಹಿಂದೇ ಇದ್ದ ಪಠ್ಯಗಳನ್ನೇ ಯಥಾವತ್ತಾಗಿ ಮುದ್ರಿಸಿ ಕೂಡಲೆ ಶಾಲೆಗಳಿಗೆ ಪೂರೈಸಬೇಕು ಎಂದು ಮುಹಮ್ಮದ್ ಅಸ್ಲಮ್  ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X