Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಮೀಣ ಭಾಗದ ಜನರ ಸಮಸ್ಯೆ ಬಗೆಹರಿಸಲು...

ಗ್ರಾಮೀಣ ಭಾಗದ ಜನರ ಸಮಸ್ಯೆ ಬಗೆಹರಿಸಲು ಹಳ್ಳಿಗೆ ಭೇಟಿ : ಜಿಲ್ಲಾಧಿಕಾರಿ ಕೂರ್ಮರಾವ್

ಉಡುಪಿ ಜಿಲ್ಲಾಧಿಕಾರಿ ನಡೆ ವರಂಗ ಕಡೆ

ವಾರ್ತಾಭಾರತಿವಾರ್ತಾಭಾರತಿ27 May 2022 3:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗ್ರಾಮೀಣ ಭಾಗದ ಜನರ ಸಮಸ್ಯೆ ಬಗೆಹರಿಸಲು ಹಳ್ಳಿಗೆ  ಭೇಟಿ : ಜಿಲ್ಲಾಧಿಕಾರಿ ಕೂರ್ಮರಾವ್

ಉಡುಪಿ : ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತವು ಹಳ್ಳಿಗೆ ಭೇಟಿ ನೀಡಿದೆ. ಇದರ ಲಾಭವನ್ನು ಸ್ಥಳೀಯ ಗ್ರಾಮಸ್ಥರೆಲ್ಲರೂ  ಪಡೆದು ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಶುಕ್ರವಾರ ಹೆಬ್ರಿ ತಾಲೂಕಿನ ವರಂಗ ಗ್ರಾಮ ವ್ಯಾಪ್ತಿಯ ಮುನಿಯಾಲಿನ ವೆಂಕಟರಮಣ ದೇವಸ್ಥಾನದ ಆವರಣ ದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸರಕಾರ ದೂರದ ಗ್ರಾಮೀಣ ಪ್ರದೇಶದ ಜನರಿಗೆ ತಾವಿದ್ದ ಸ್ಥಳಕ್ಕೆ ಅಧಿಕಾರಿ ಗಳು ಬಂದು ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿ, ಸ್ಪಂದಿಸಬೇಕೆಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವನ್ನು ಆಯೋಜಿಸಿದೆ ಎಂದವರು ಹೇಳಿದರು.

ಸಮುದಾಯಗಳ ಸಮಸ್ಯೆ ಹಾಗೂ ವೈಯಕ್ತಿಕ ಸಮಸ್ಯೆಗಳು ಸೇರಿದಂತೆ ಒಟ್ಟು ೧೪೫ ಅರ್ಜಿಗಳು ಬಂದಿವೆ. ಇವುಗಳಲ್ಲಿ ಹೆಚ್ಚಿನವು ನಿವೇಶನ ನೀಡುವ ಬಗ್ಗೆ, ಸ್ಮಶಾನಕ್ಕೆ ಜಾಗ ಕಾಯ್ದಿರಿಸುವುದು, ವಿದ್ಯುತ್ ಕಲ್ಪಿಸುವುದು, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಕೋರಿರುವುದು ಕಂಡುಬಂದಿವೆ. ಇವುಗಳನ್ನು ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ, ಕಾನೂನಿನ ವ್ಯಾಪ್ತಿಯಲ್ಲಿ ಇಂದೇ ಬಗೆಹರಿಸಲಾಗು ವುದು ಎಂದರು.

ಮಳೆಗಾಲದ ಕಾರ, ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಉತ್ಪತ್ತಿಯಿಂದ ಕೀಟ ಜನ್ಯ ರೋಗಗಳೂ ಸೇರಿದಂತೆ ಡೆಂಗಿ ಪ್ರಕರಣಗಳು ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ಪಚ್ಛವಾಗಿಟ್ಟುಕೊಳ್ಳಬೇಕು. ಜೊತೆಗೆ, ಮಳೆಯ ನೀರು ನಿಲ್ಲದಂತೆ ನೋಡಿಕೊಂಡು ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದರು.

ಇಂದು ಎಲ್ಲಾ ಇಲಾಖಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧೀನ ಕಚೇರಿಗಳಾದ ಶಾಲೆ, ಅಂಗನ ವಾಡಿ, ವಸತಿ ನಿಲಯ, ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ಕಚೇರಿಗಳಿಗೆ ತಪ್ಪದೇ ಭೇಟಿ ನೀಡಿ, ಅಲ್ಲಿನ ಕಾರ್ಯ  ಚಟುವಟಿಕೆಗಳನ್ನು ಪರಿಶೀಲಿಸಿ, ಏನೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸಬೇಕೆಂದು ಸೂಚನೆ ನೀಡಿದರು.

ಸಾರ್ವಜನಿಕ ಉಪಯೋಗಕ್ಕೆ ಅವಶ್ಯಕವಿರುವ ಅಭಿವೃದ್ಧಿ ಕಾರ್ಯಗಳನ್ನು ಇಲಾಖಾ ಅಧಿಕಾರಿಗಳು ಆದ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣ ಗೊಳಿಸಬೇಕೆಂದು ಸೂಚಿಸಿದ ಅವರು, ಶಾಲೆಗಳ ದುರಸ್ಥಿ, ಕಾಂಪೌಂಡ್  ನಿರ್ಮಾಣ, ಮೈದಾನ ಸೇರಿದಂತೆ ಇತರ ಕಾಮಗಾರಿಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಕಳೆದ ಕೊರೋನಾ ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದವರು  ಗ್ರಾಮ ಗಳಿಗೆ ಹಿಂದಿರುಗಿ ವರ್ಕ್ ಫ್ರಂ ಹೋಮ್ ಕಾರ್ಯಗಳನ್ನು ಮಾಡಲು ಹಾಗೂ ಶಾಲಾ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಲು ನೆಟ್‌ವರ್ಕ್ ಅಲಭ್ಯತೆಯಿಂದ ಅನಾನುಕೂಲ ಉಂಟಾಗಿದ್ದವು. ಈ ಸಮಸ್ಯೆ ಬಗೆ ಹರಿಸಲು ಹೆಚ್ಚಿನ ಒತ್ತು ಕೊಡಬೇಕು ಎಂದು ಮೆಸ್ಕಾಂ ನಿರ್ದೇಶಕ ದಿನೇಶ್ ಪೈ ಹೇಳಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ೧, ಭೂ ಮಾಪನಾ ಇಲಾಖೆಯ ೩, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ೩, ಆಹಾರ ಇಲಾಖೆಯ ೩, ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ೩, ಪಂಚಾಯತ್ ರಾಜ್ ಇಲಾಖೆಯ ೪೮, ಶಿಕ್ಷಣ ಇಲಾಖೆ ೫, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ೨, ಪೊಲೀಸ್ ಇಲಾಖೆಯ ೫, ಕಂದಾಯ ಇಲಾಖೆಯ ೫೧, ಅರಣ್ಯ ಇಲಾಖೆಯ ೫, ಲೋಕೋಪಯೋಗಿ ಇಲಾಖೆಯ ೨, ಸಣ್ಣ ನೀರಾವರಿ ಇಲಾಖೆಯ ೨ ಹಾಗೂ ಮೆಸ್ಕಾಂನ ೭, ಗಿರಿಜನ ಸಮಗ್ರ ಅಭಿವೃದ್ಧಿ ಇಲಾಖೆ ೩, ಕೆಎಸ್ಸಾರ್ಟಿಸಿಯ ೨ ಅರ್ಜಿಗಳು ಸೇರಿದಂತೆ ಒಟ್ಟು ೧೪೫ ಅರ್ಜಿಗಳನ್ನು  ಸ್ವೀಕರಿಸಲಾಯಿತು. 

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪುರಂದರ ಕೆ, ಕುದುರೆಮುಖ ಡಿಎಫ್‌ಒ ಗಣಪತಿ, ಎಸಿಎಫ್ ಕಾಜಲ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಕುಂದಾಪುರ ಡಿಎಫ್‌ಒ ಆಶೀಶ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್ ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X