Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. VIDEO ನೋಡಿ- ನೆಹರು-ಮೋದಿ ನಡುವೆ ಭೂಮಿ...

VIDEO ನೋಡಿ- ನೆಹರು-ಮೋದಿ ನಡುವೆ ಭೂಮಿ ಆಕಾಶದಷ್ಟು ಅಂತರ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 May 2022 8:50 PM IST
share
VIDEO ನೋಡಿ- ನೆಹರು-ಮೋದಿ ನಡುವೆ ಭೂಮಿ ಆಕಾಶದಷ್ಟು ಅಂತರ: ಸಿದ್ದರಾಮಯ್ಯ

ಬೆಂಗಳೂರು, ಮೇ 27: ಇವತ್ತಿನ ಪ್ರಧಾನಿಗೂ, ನೆಹರು ಅವರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ನೆಹರು ಅವರೆಲ್ಲಿ ನರೇಂದ್ರ ಮೋದಿಯವರೆಲ್ಲಿ. ಇವರ ನಡುವೆ ಭೂಮಿ ಹಾಗೂ ಆಕಾಶದಷ್ಟು ಅಂತರವಿದೆ. ಇವರ ನಡುವೆ ಹೋಲಿಕೆ ಅಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದೇಶದ ಪ್ರಥಮ ಪ್ರಧಾನಿ ಜವಾಹರ್‍ಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೆಹರು ಅವರು ಮಾಡಿರುವ ಒಳ್ಳೆ ಕೆಲಸಗಳನ್ನು ಅಳಿಸಿ ಹಾಕುವ ಪ್ರಯತ್ನ ಮೋದಿ ಮಾಡುತ್ತಿದ್ದಾರೆ. ದೇಶದ ಅಭಿವೃದ್ಧಿಗಾಗಿ ಪಂಚವಾರ್ಷಿಕ ಯೋಜನೆಗಳನ್ನು ನೆಹರು ಜಾರಿಗೆ ತಂದರು. ಈಗ ಆ ಪಂಚವಾರ್ಷಿಕ ಯೋಜನೆಗಳಿಲ್ಲ. ಇದನ್ನು ತೆಗೆದು ಹಾಕಿ ನೀತಿ ಆಯೋಗ ಎಂದು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಈ ನೀತಿ ಆಯೋಗವು ಸರಕಾರದ ಕೈಗೊಂಬೆಯಾಗಿದೆ. ಆರ್‍ಬಿಐ, ಸಿಎಜಿ ನಿಷ್ಕ್ರಿಯವಾಗಿದೆ. ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ಮೋದಿ ನಿಷ್ಕ್ರಿಯಗೊಳಿಸಿದ್ದಾರೆ. ಅಂಕಿ, ಅಂಶಗಳ ಆಯೋಗವು ದೇಶದ ಆರ್ಥಿಕತೆ, ಆರೋಗ್ಯ ಸೂಚ್ಯಂಕ, ನಿರುದ್ಯೋಗ ಎಲ್ಲದರ ಬಗ್ಗೆಯೂ ಅಂಕಿಅಂಶ ನೀಡುತ್ತಿತ್ತು. ಈಗ ಅದು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಅವರು ಹೇಳಿದರು.

ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಕತ್ತು ಹಿಸುಕಿ ಕೊಲ್ಲುವ ಪ್ರಯತ್ನ ಮಾಡಲಾಗುತ್ತಿದೆ. ನೆಹರು ಅವರು ಮಹಾನ್ ಪ್ರಜಾಪ್ರಭುತ್ವವಾದಿಯಾದರೆ ಮೋದಿ ಅದಕ್ಕೆ ತದ್ವಿರುದ್ಧವಾಗಿ ಇದ್ದಾರೆ. ಇದೆಲ್ಲವೂ ಆತಂಕಕಾರಿ ಬೆಳವಣಿಗೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಎಚ್ಚರಿಸಿದರು.

ನೆಹರು 17 ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ಈ ದೇಶವನ್ನು ತಳಮಟ್ಟದಿಂದ ಮೇಲೆತ್ತಲು ಶ್ರಮಿಸಿದ್ದರು. ಬ್ರಿಟಿಷರು ಈ ದೇಶವನ್ನು ನಾಶಮಾಡಿ ಹೋಗಿದ್ದರು. ಅಂದು ದೇಶದ ಸಾಕ್ಷರತಾ ಪ್ರಮಾಣ ಶೇ.15ರಷ್ಟು ಇತ್ತು. ಇಂದು ಸಾಕ್ಷರತಾ ಪ್ರಮಾಣ ಶೇ.75ರಿಂದ 78ರಷ್ಟು ಏರಿಕೆಯಾಗಿದ್ದರೆ ಅದಕ್ಕೆ ನೆಹರು ಹಾಕಿಕೊಟ್ಟ ಅಡಿಪಾಯವೇ ಕಾರಣ ಎಂದು ಅವರು ಹೇಳಿದರು. 

ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯನ್ನು ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಿದ್ದಾರೆ. ರೋಹಿತ್ ಚಕ್ರತೀರ್ಥ ಹೆಡ್ಗೇವಾರ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾನೆ. ಭಗತ್ ಸಿಂಗ್‍ರಂತಹ ದೇಶ ಭಕ್ತರ ವಿಚಾರವನ್ನು ತೆಗೆದುಹಾಕಿ ಮಕ್ಕಳಿಗೆ ಬೋಧನೆ ಮಾಡುವುದಾದರೆ ನಾವು ಈ ದೇಶವನ್ನು ಯಾವ ದಿಕ್ಕಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. 

ಆರೆಸ್ಸೆಸ್‍ನವರು ಮೂಲ ಭಾರತೀಯರೇ? ಎಲ್ಲ ಚರ್ಚೆ ಮಾಡಬಾರದು ಎಂದು ನಾವು ಭಾವಿಸಿದ್ದೇವೆ. ಆರ್ಯರು ಭಾರತದವರಾ? ಇವರೇನು ದ್ರಾವಿಡರೆ ಇವರು ಅಫ್ಘಾನಿಸ್ತಾನದ ಮೂಲದವರು. ಮೊಗಲರು ಈ ದೇಶವನ್ನು 600 ವರ್ಷಗಳ ಕಾಲ ಆಳಬೇಕಾದರೆ ಯಾರು ಕಾರಣ? ನೀವೆಲ್ಲರೂ ಒಗ್ಗಟ್ಟಾಗಿ ಇದ್ದಿದ್ದರೆ ಮೊಗಲರು ಯಾಕೆ ಇಲ್ಲಿಗೆ ಬಂದು ಆಳುತ್ತಿದ್ದರು? ಅವರಿಗೆ ಜಾಗ ಕೊಟ್ಟವರು ಯಾರು? ಬ್ರಿಟಿಷರು ಈ ದೇಶವನ್ನು ಇನ್ನೂರು ವರ್ಷಗಳ ಕಾಲ ಆಳಲು ಕಾರಣ ಯಾರು? ಎಂದು ಅವರು ಪ್ರಶ್ನಿಸಿದರು.

ಚರಿತ್ರೆಗಳಿಂದ ಪಾಠ ಕಲಿತ ನಾವು, ದೇಶ ಕಟ್ಟಬೇಕೇ ಹೊರತು ಚರಿತ್ರೆಯಲ್ಲಿ ಯಾವುದು ಎಲ್ಲೆಲ್ಲಿ ಏನಿತ್ತು ಎಂದು ಕೆದಕಲು ಹೋಗಬಾರದು. ಈ ದೇಶವನ್ನು 5,000 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು. 

ಇಂದು ಕಾಂಗ್ರೆಸ್‍ನವರ ಜವಾಬ್ದಾರಿ ಹೆಚ್ಚಾಗುತ್ತಿದೆ. ಬಿಜೆಪಿಯವರು ಸಮಾಜ ಹಾಗೂ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಅವರು ನೈಜ್ಯ ಸಮಸ್ಯೆಗಳ ಬಗ್ಗೆ ಯಾವತ್ತು ಚರ್ಚೆ ಮಾಡುವುದಿಲ್ಲ. ಅವರು ಈ ದೇಶದ ಬಡತನ, ಹಸಿವು, ಜಾತ್ಯತೀತತೆ, ಸಂವಿಧಾನ, ನಿರುದ್ಯೋಗ, ಅನಕ್ಷರತೆ ಬಗ್ಗೆ ಚರ್ಚೆ ಮಾಡಿದ ಉದಾಹರಣೆಗಳನ್ನು ನೀಡಿ ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡಲು ಜವಾಹರಲಾಲ್ ನೆಹರು ಒಂದು ಭದ್ರ ಬುನಾದಿಯನ್ನು ಹಾಕಿಕೊಟ್ಟರು. ಇಂದಿಗೂ ನಾವು ಅದೇ ಭದ್ರ ಬುನಾದಿಯ ಮೇಲೆ ರಾಷ್ಟ್ರ ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ನೆಹರು ಅವರ ಕೊಡುಗೆಯನ್ನು ಮಾಧ್ಯಮಗಳ ಮೂಲಕವಾಗಲಿ, ವಿಶ್ಲೇಷಕರು, ಚಿಂತಕರು, ತಜ್ಞರ ಭಾಷಣಗಳ ಮೂಲಕ ತಿಳಿದುಕೊಳ್ಳುವ ಅಗತ್ಯವಿಲ್ಲ. ಅವರ ಕಾಲಾವಧಿಯಲ್ಲಿ ನಿರ್ಮಾಣವಾದ ಆಣೆಕಟ್ಟುಗಳು, ವಿಶ್ವವಿದ್ಯಾಲಯಗಳು, ಸಂವಿಧಾನ ರಚನೆ, ಸಾರ್ವಜನಿಕ ವಲಯದ ಕ್ಷೇತ್ರಗಳಾದ ಎಚ್‍ಎಂಟಿ, ಎಚ್‍ಎಎಲ್, ಬಿಇಎಲ್, ಇಸ್ರೋ ಸ್ಥಾಪನೆ ಸೇರಿದಂತೆ ಅನೇಕ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ ಎಂದು ಶಿವಕುಮಾರ್ ಹೇಳಿದರು.

ಇವೆಲ್ಲವೂ ನಮ್ಮ ಜನರಿಗೆ ಉದ್ಯೋಗ ಸೃಷ್ಟಿ, ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಲು ಭದ್ರ ಅಡಿಪಾಯ ಹಾಕಿ ಕೊಟ್ಟಿದ್ದವು. ಬೆಂಗಳೂರಿಗೆ ಅವರು ಕೊಟ್ಟ ಕೊಡುಗೆ ಅಪಾರ. ಈ ಎಲ್ಲ ಆಸ್ತಿಗಳನ್ನು ಬಿಜೆಪಿಯ ಕೇಂದ್ರ ಸರಕಾರ ಈಗ ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ ಎಂದು ಅವರು ಟೀಕಿಸಿದರು.

ನೆಹರು ಹಾಗೂ ಇಂದಿರಾ ಗಾಂಧಿಯವರ ಆಡಳಿತವನ್ನು ಇಡೀ ವಿಶ್ವವೇ ನಿಬ್ಬೆರಗಾಗಿ ನೋಡಿತ್ತು. ಇದು ಭಾರತದ ಬಲಿಷ್ಠ ಅಡಿಪಾಯವಾಗಿತ್ತು. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಆಗಿದೆ. ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೆ ಬಂದು ಎಂಟು ವರ್ಷಗಳಾಗಿವೆ. ಇಡಿ ವಿಶ್ವವೇ ನಮ್ಮ ಶಿಕ್ಷಣ ನೀತಿಯನ್ನು ಹೊಗಳುತ್ತಿರುವಾಗ ಈಗ ಇಲ್ಲಿನ ಶಿಕ್ಷಣ ನೀತಿಯನ್ನು ಬದಲಿಸಲು ಮುಂದಾಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ರೋಹಿತ್ ಚಕ್ರತೀರ್ಥ ನಮ್ಮ ಕನ್ನಡದ ಬಾವುಟವನ್ನು ಒಳ ಉಡುಪಿಗೆ ಹೋಲಿಕೆ ಮಾಡಿ ಅವಹೇಳನ ಮಾಡಿದ. ಕನ್ನಡಪರ ಸಂಘಟನೆಗಳು ಏನು ಮಾಡುತ್ತಿವೆ? ನೀವು ಈ ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದ ಸ್ವಾಭಿಮಾನಕ್ಕೆ ಹೋರಾಡುತ್ತಿದ್ದರೆ, ಈ ನೆಲ, ಜಲ, ಭಾಷೆ ಉಳಿಸಿಕೊಳ್ಳಬೇಕಾದರೆ, ಎಲ್ಲ ಸಂಘಟನೆಗಳು ಆತನ ವಿರುದ್ಧ ಹೋರಾಟ ಮಾಡಬೇಕು.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X