ಕಣಚೂರು ನರ್ಸಿಂಗ್ , ಫಿಸಿಯೋಥೆರಪಿ, ಹೆಲ್ತ್ ಸಯನ್ಸ್ ಕಾಲೇಜು ಪದವಿ ದಿನಾಚರಣೆ

ಕೊಣಾಜೆ, ಮೇ 28: ದೇರಳಕಟ್ಟೆಯ ಕಣಚೂರು ಶಿಕ್ಷಣ ಸಂಸ್ಥೆಯ ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಹಾಗೂ ಆರೋಗ್ಯ ವಿಜ್ಞಾನ ಶೈಕ್ಷಣಿಕ ಘಟಕದ ಪದವಿ ದಿನಾಚರಣೆ ಶನಿವಾರ ನಡೆಯಿತು.
ಪದ್ಮಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಕಣಚೂರು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪದವೀಧರರಿಗೆ ಪದವಿ ಪ್ರಮಾಣಪತ್ರವನ್ನು ಡಾ.ವೀರೇಂದ್ರ ಹೆಗ್ಡೆ ಹಾಗೂ ಗಣ್ಯರು ವಿತರಿಸಿದರು. ರ್ಯಾಂಕ್ ಹಾಗೂ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಸ್.ಶ್ರೀಪ್ರಕಾಶ್, ಸಿಂಡಿಕೇಟ್ ಸದಸ್ಯ ಪ್ರೊ.ಯು.ಟಿ.ಇಪ್ತಿಕಾರ್ ಅಲಿ, ಕಣಚೂರು ಕಾಲೇಜಿನ ಡೀನ್ ಡಾ.ಮುಹಮ್ಮದ್ ಸುಹೈಲ್, ಕಣಚೂರು ಕಾಲೇಜು ಪಿಸಿಯೋಥೆರಪಿ ವಿಭಾಗದ ಪ್ರಾಂಶುಪಾಲೆ ಪ್ರೊ.ಮೊಲ್ಲಿ ಸಲ್ದಾನ ಮೊದಲಾದವರು ಉಪಸ್ಥಿತರಿದ್ದರು.
ಡಾ.ಅಬ್ದುಲ್ ರಹ್ಮಾನ್ ಸ್ವಾಗತಿಸಿದರು.