ನೇರಳಕಟ್ಟೆಯಲ್ಲಿ ರಸ್ತೆ ಅಪಘಾತ: ಯುವಕ ಮೃತ್ಯು

ಸಾಂದರ್ಭಿಕ ಚಿತ್ರ
ಬಂಟ್ವಾಳ, ಮೇ 28: ತಾಲೂಕಿನ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಬಕ ಸಮೀಪದ ಅರ್ಕ ನಿವಾಸಿ ಸೇಸಪ್ಪ ನಾಯ್ಕ್ ಎಂಬವರ ಪುತ್ರ ಕಿಶೋರ್(28) ಮೃತಪಟ್ಟ ಯುವಕ.
ಬೈಕಿನಲ್ಲಿ ತನ್ನ ಸ್ನೇಹಿತನನ್ನು ಕಬಕದಿಂದ ಕಲ್ಲಡ್ಕಕ್ಕೆ ಬಿಟ್ಟು ಕಬಕಕ್ಕೆ ಹಿಂದಿರುಗುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಿಂದ ಕಿಶೋರ್ ಅವರ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Next Story