ಮಂಗಳೂರು: ಚಿನ್ನ ಅಕ್ರಮ ಸಾಗಾಟ ಪತ್ತೆ; ಆರೋಪಿಯ ಬಂದನ

ಮಂಗಳೂರು, ಮೇ 28: ದುಬೈನಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಸುಮಾರು 29.12 ಲ.ರೂ. ಮೌಲ್ಯದ 560 ಗ್ರಾಂ ತೂಕದ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ಭಟ್ಕಳದ ಪ್ರಯಾಣಿಕನೊಬ್ಬ 24 ಕ್ಯಾರೆಟ್ ಪರಿಶುದ್ಧತೆಯ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುಳಿಗೆ ಆಕಾರದ ಪ್ಯಾಕ್‌ಗಳನ್ನಾಗಿ ಮಾಡಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story