ಮಂಗಳೂರು: ಬಿಐಟಿ ಪಾಲಿಟೆಕ್ನಿಕ್; ಪ್ರವೇಶಾತಿ ಆರಂಭ

ಮಂಗಳೂರು: ಬ್ಯಾರೀಸ್ ಇನ್ಸಿಟ್ಯೂಷನ್ ಆಫ್ ಟೆಕ್ನಾಲಜಿ, ಡಿಪ್ಲೊಮಾ ಮಂಗಳೂರು 2022-23 ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.
ಮೊದಲು ಬರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೆಲೆಯಲ್ಲಿ ಪ್ರವೇಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸಂಬಂಧಪಟ್ಟ ದಾಖಲೆಗಳು ಹಾಗೂ ಶುಲ್ಕದೊಂದಿಗೆ ಕಾಲೇಜಿಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದು.
ಬ್ಯಾರೀಸ್ ಸಂಸ್ಥೆಯ ವತಿಯಿಂದ ಮೆರಿಟ್ ಆಧಾರದಲ್ಲಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗುವುದು ಹಾಗೂ ಎಸ್.ಎನ್.ಕ್ಯೂ ಕೋಟಾದಡಿ ಸೀಟುಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 9900066888 ಹಾಗೂ ಬ್ಯಾರೀಸ್ ಕಾಲೇಜನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story