ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.
“ಈ ಪತ್ರದ ಮೂಲಕ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ.
ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಪಕ್ಷಕ್ಕೆ ಸೇರ್ಪಡೆ ಹೊಂದಿದೆ. ಪಕ್ಷಕ್ಕೆ ಸೇರಿದಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪ್ತಿಯಿದೆ.
ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು, ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ.
ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು” ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.








