ಐದನೇ ಹಂತದ ಸ್ವಚ್ಛ ಕಡಲ ತೀರ -ಹಸಿರು ಕೋಡಿ ಅಭಿಯಾನ

ಕುಂದಾಪುರ : ಕೋಡಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳ ವತಿಯಿಂದ ಸ್ವಚ್ಛ ಕಡಲತೀರ -ಹಸಿರುಕೋಡಿ ಅಭಿಯಾನ ೨೦೨೨ ಇದರ ಐದನೆ ಹಂತ ಕೋಡಿಯಲ್ಲಿ ರವಿವಾರ ನಡೆಯಿತು.
ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು, ನಿಸರ್ಗಪ್ರಿಯರು ಹಾಗೂ ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು.
ಈ ಕಾರ್ಯದಲ್ಲಿ ನಮಗೆ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿಗಳು, ಪದಾಧಿಕಾರಿ ಗಳಿಗೆ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಹಾಜಿ ಕೆಎಂ ಅಬ್ದುಲ್ ರಹ್ಮಾನ್ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರದೇಶದ ಸ್ವಚ್ಛತೆಯನ್ನು ಕಾಪಾಡುವ ಜವಾ ಬ್ದಾರಿಯನ್ನು ತಿಳಿಸುವ ಕಾರ್ಯ ನಿರಂತರವಾಗಿ ಈ ಅಭಿಯಾನದ ಮೂಲಕ ನಡೆಯುತ್ತಿರುವ ಕುರಿತು ಹರ್ಷ ವ್ಯಕ್ತಪಡಿಸಿ, ಇದರಲ್ಲಿ ಪಾಲ್ಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಎಲ್ಲಾ ಸಹೃದಯರಿಗೆ ಸಂಸ್ಥೆಯ ಚೇಯರ್ ಸೈಯ್ಯದ್ ಮುಹಮ್ಮದ್ ಬ್ಯಾರಿ ಅಭಿನಂದನೆ ಸಲ್ಲಿಸಿದ್ದಾರೆ.