ತಾಂತ್ರಿಕ -ಸಾಂಸ್ಕೃತಿಕ ಸ್ಪರ್ಧೆ ‘ವರ್ಣೋತ್ಸವ’ ಸಮಾರೋಪ

ಉಡುಪಿ : ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಕಾಲೇಜು ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನೊಳಗೊಂಡ ವರ್ಣೋತ್ಸವ-೨೨ ಸಮಾರೋಪ ಸಮಾರಂಭವು ಶನಿವಾರ ಕಾಲೇಜಿನ ಆವರವಣದಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಮಂಗಳೂರಿನ ಜ್ಯುಗೋ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್‌ನ ಡೆಲಿವರಿ ವಿಭಾಗದ ಉಪಾಧ್ಯಕ್ಷ ಅಭಿಜಿತ್ ಶೆಟ್ಟಿ ಮಾತನಾಡಿ ದರು. ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.
ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಲೊಲಿಟ ಪ್ರಿಯ ಕ್ಯಾಸ್ಟಲಿನೋ ಸ್ವಾಗತಿಸಿ ದರು. ಅನಂತೇಶ್ ರಾವ್ ಕೆ. ವರದಿ ವಾಚಿಸಿದರು. ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ಅಧಿಕಾರಿ ವಿದ್ಯಾ ಭಟ್ ಅತಿಥಿಗಳನ್ನು ಪರಿಚಯಿಸಿದರು. ಅನಂತ್ ಮಲ್ಯ ಮತ್ತು ಸೌಮ್ಯ ವಿಜೇತರ ಪಟ್ಟಿಯನ್ನು ವಾಚಿಸಿದರು.
ರೆನಿಟಾ ಶರೋನ್ ಮೋನಿಸ್ ವಂದಿಸಿದರು. ಅನಿಕೇತ್ ಶೆಣೈ ಮತ್ತು ಅನಿಂದಿತ ಕಾರ್ಯಕ್ರಮ ನಿರೂಪಿಸಿದರು. ಆಹಾರ ಮೇಳ ಮತ್ತು ವಿಟೇಜ್ ಕಾರು ಬೈಕುಗಳ ಪ್ರದರ್ಶನ ಈ ಬಾರಿಯ ವರ್ಣೋತ್ಸವದ ವಿಶೇಷ ಆಕರ್ಷಣೆಗಳಾಗಿದ್ದವು. ಕಾಲೇಜಿನ ಸುಮಾರು ೪೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಹಬ್ಬದಲ್ಲಿ ಭಾಗವಹಿಸಿದ್ದರು.