Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲಾವಿದರ ಸಮರ್ಪಣಾ ಭಾವದಿಂದ ಯಕ್ಷಗಾನ ಕಲೆ...

ಕಲಾವಿದರ ಸಮರ್ಪಣಾ ಭಾವದಿಂದ ಯಕ್ಷಗಾನ ಕಲೆ ಉಳಿದಿದೆ : ಸಚಿವ ಅರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ29 May 2022 9:59 PM IST
share
ಕಲಾವಿದರ ಸಮರ್ಪಣಾ ಭಾವದಿಂದ ಯಕ್ಷಗಾನ ಕಲೆ ಉಳಿದಿದೆ : ಸಚಿವ ಅರಗ ಜ್ಞಾನೇಂದ್ರ

ಮಂಗಳೂರು, (ಪುನೀತ್ ರಾಜ್ ಕುಮಾರ್ ವೇದಿಕೆ): ಕಲಾವಿದರ ಸಮರ್ಪಣಾ ಭಾವದಿಂದ, ಹೊಸತನವನ್ನು ಮೈಗೂಡಿಸಿ ಕೊಂಡ ಯಕ್ಷಗಾನ ದಂತಹ ಕಲೆ ಉಳಿದಿದೆ ಎಂದು  ಕರ್ನಾಟಕ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ  ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ 2022 ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ನಮ್ಮ ನಡುವೆ ಸಾಕಷ್ಟು ಕಲೆಗಳು ನಶಿಸಿ ಹೋಗಿವೆ. ಆದರೆ ಯಕ್ಷಗಾನ ಕಲೆಯಲ್ಲಿ ಪಟ್ಲ ಸತೀಶ್ ರಂತಹ ಯುವ ಕಲಾವಿದರು ಹೊಸತನವನ್ನು ಈ ಕಲೆಯಲ್ಲಿ ತೋರಿಸಿ ಕೊಟ್ಟ ಕಾರಣ ಸಾಕಷ್ಟು ಜನರನ್ನು ಆಕರ್ಷಿಸುತ್ತಿದೆ. ಯಕ್ಷಗಾನ ಎಲ್ಲರನ್ನೂ ಆಕರ್ಷಿಸುವ ಒಂದು ಅದ್ಭುತ ಕಲೆ. ಆದರೆ ಯಕ್ಷಗಾನ ಕಲಾವಿದರು ತಮ್ಮ ಬದುಕನ್ನು ಕಟ್ಟಿ ಕೊಳ್ಳಲು ಸಾಕಷ್ಟು ಕಷ್ಟ ನಷ್ಟ ಪಟ್ಟಿದ್ದಾರೆ. ಅದರಿಂದಾಗಿ ಕಲೆ ಉಳಿದಿದೆ. ಕನ್ನಡ ಭಾಷೆ ಬೆಳೆದಿದೆ. ಇಂತಹ ಕಲಾವಿದರಿಗೆ ನೆರವು ನೀಡಲು ಪಟ್ಲ ಫೌಂಡೇಶನ್ ಮುಂದೆ ಬಂದಿರುವುದು ಶ್ಲಾಘನೀಯ. ಅವರ ಯೋಜನೆ ಗೆ ಸರಕಾರದ ಸಹಾಯ ನೀಡುವ ಭರವಸೆ ನೀಡಿದರು. ನಾನು ಯಕ್ಷಗಾನದ ಮತ್ತು ಪಟ್ಲ ಸತೀಶ್ ಅವರ ಅಭಿಮಾನಿ ಎಂದು  ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಮಾರಂಭದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮತ್ತು ಶ್ರೀ ಒಡಿಯೂರು ಕ್ಷೇತ್ರದ ಶ್ರೀ ಗುರುದೆವಾ ನಂದ ಸ್ವಾಮೀಜಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಬಂದರು ಮತ್ತು ಮೀನುಗಾರಿಕೆ ಸಚಿವ ಅಂಗಾರ, ಶಾಸಕ ವೇದವ್ಯಾಸ ಕಾಮತ್,  ಡಾ.ಮಂಜುನಾಥ ಭಂಡಾರಿ, ನಿವೃತ್ತ ಕೆಪಿಎಸ್ಸಿ ಆಯುಕ್ತ ಟಿ,ಶ್ಯಾಮ್ ಭಟ್, ಕಿಯೋನಿಸ್ಕ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೈಸೂರು ಎಲೆಕ್ಟ್ರಾನಿಕ್ ಲಿ.ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೊಳಿಯಾರ್,ಹೇರಂಬ ಕೆಮಿಕಲ್ ಇಂಡಸ್ಟ್ರಿಸ್ ಇದರ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಗುಜರಾತ್ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಸಿಎ ದಿವಾಕರ್ ರಾವ್, ಉದ್ಯಮಿ ಆನಂದ ಶೆಟ್ಟಿ ತೋನ್ಸೆ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,  ಶಶೀಂದ್ರ ಕುಮಾರ್, ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಜಯರಾಮ್ ಶೇಖ, ಬಂಟ್ಸ್ ಸಂಘ ಸುರತ್ಕಲ್ ಅಧ್ಯಕ್ಷ ಸುಧಾಕರ್ ಪೂಂಜಾ, ಅಡ್ಯಾರ್ ಮಾಧವ್ ನಾಯಿಕ್, ಕಳತ್ತೂರು ವಿಶ್ವನಾಥ್ ಶೆಟ್ಟಿ, ವಿಜಯಕುಮಾರ್ ಅಮೀನ್,ಪಟ್ಲ  ಮಹಾಬಲ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ಕದ್ರಿ ನವನೀತ ಶೆಟ್ಟಿಮತ್ತು  ಪುರುಷೋತ್ತಮ ಕೆ ಭಂಡಾರಿ ಕಾರ್ಯ ಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ರವರಿಗೆ ಪಟ್ಲ ಪ್ರಶಸ್ತಿ 2022 ನ್ನು ವಿತರಿಸಿ ಸನ್ಮಾನಿಸಲಾಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಲ್. ಸಾಮಗ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದಲ್ಲಿ ಉದ್ಯಮಿಕೆ. ಡಿ.ಶೆಟ್ಟಿ ದಂಪತಿ, ವಕ್ವಾಡಿ ಪ್ರವೀಣ್ ಶೆಟ್ಟಿ, ಸವಣೂರು ಸೀತಾರಾಮ ರೈ ದಂಪತಿ, ಸುರೇಶ್ ಭಂಡಾರಿ ಮೊದಲಾದವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X