ವಿಟ್ಲ: ಹೊರೈಝನ್ ಶಾಲಾ ಪ್ರಾರಂಭೋತ್ಸವ

ವಿಟ್ಲ, ಮೇ 30: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ಪ್ರಾರಂಭೋತ್ಸವವು ಸೋಮವಾರ ಜರುಗಿತು.
ಶಾಲಾಡಳಿತ ಸಮಿತಿಯ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಹಾನೆಸ್ಟ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವು ಮಸೀದಿಯ ಖತೀಬ್ ನಸೀಹ್ ದಾರಿಮಿ ದುಆದೊಂದಿಗೆ ಆರಂಭಗೊಂಡಿತು.
ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂ.ಎ., ಸಂಚಾಲಕ ನೋಟರಿ ಅಬೂಬಕರ್, ಮಾಜಿ ಅಧ್ಯಕ್ಷ ಶೇಖ್ ಆದಂ ಸಾಹೇಬ್, ಮೇಲ್ವಿಚಾರಕ ವಿ.ಕೆ.ಎಂ.ಅಶ್ರಫ್, ಟ್ರಸ್ಟಿಗಳಾದ ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ ದೀಪಕ್, ಇಕ್ಬಾಲ್ ಹಳೆಮನೆ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಮಸೀದಿಯ ಅಧ್ಯಕ್ಷ ಇಕ್ಬಾಲ್ ಶೀತಲ್, ಉಪಾಧ್ಯಕ್ಷ ಅಬ್ದುಲ್ಲಕುಂಞಿ, ಕಾರ್ಯದರ್ಶಿ ಅಬ್ದುಲ್ ಹಮೀದ್ ಬದ್ರಿಯಾ, ಜತೆ ಕಾರ್ಯದರ್ಶಿ ಹಮೀದ್ ಕುರುಂಬಳ, ಕೋಶಾಧಿಕಾರಿ ಶರೀಫ್ ಮೇಗಿನಪೇಟೆ, ಮಾಜಿ ಅಧ್ಯಕ್ಷ ಇಬ್ರಾಹೀಂ ಹಳೆಮನೆ, ವಿ.ಎ.ರಶೀದ್, ವಿಕೆ.ಎಂ.ಹಂಝ ಮುಂತಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು. ಶಿಕ್ಷಕಿ ಗಾಯತ್ರಿ ವಂದಿಸಿದರು. ಚೇತನಾ ಕಾರ್ಯಕ್ರಮ ನಿರೂಪಿಸಿದರು.