Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕಾಲೇಜು ವಿದ್ಯಾರ್ಥಿಗಳ...

ಮಂಗಳೂರು | ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ: ಎಂಟು ಆರೋಪಿ ವಿದ್ಯಾರ್ಥಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ30 May 2022 4:25 PM IST
share
ಮಂಗಳೂರು | ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ: ಎಂಟು ಆರೋಪಿ ವಿದ್ಯಾರ್ಥಿಗಳ ಬಂಧನ

ಮಂಗಳೂರು, ಮೇ 30: ನಗರದ ಉರ್ವಾ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರದ ಬಲ್ಮಠದಲ್ಲಿರುವ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮುಹಮ್ಮದ್ ಅಫ್ರೀಶ್, ಸುನೈಫ್, ಶೇಖ್ ಮೊಹಿದ್ದೀನ್, ಇಬ್ರಾಹೀಂ ರಾಝಿ, ಮುಹಮ್ಮದ್ ಸಿನಾನ್ ಅಬ್ದುಲ್ಲಾ, ಮುಹ್ಮಮದ್ ಅಶಾಮ್, ಮುಹಮ್ಮದ್ ಅಫಾಮ್ ಅಸ್ಲಮ್, ಮುಹಮ್ಮದ್ ಸೈಯದ್ ಅಫ್ರೀದ್ ಬಂಧಿತ ಆರೋಪಿಗಳಾಗಿದ್ದಾರೆ.

ಕೇರಳದ ಮಲಪ್ಪುರಂ ನಿವಾಸಿ ಹಾಗೂ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಬಾಬ್ ಕೆ. ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಶನಿವಾರ ಸಂಜೆ ಕಾಲೇಜು ಸಮೀಪದ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಬಾಬ್ ಭಾಗವಹಿಸಿದ್ದರು. ಈ ಸಂದರ್ಭ ಪರಸ್ಪರ ಕೈಕಾಲು ತಾಗಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಇದೇ ವಿಚಾರವಾಗಿ ಸಭಾಂಗಣದ  ಹೊರಗಡೆ ಬಂದ ಬಳಿಕ 12 ಮಂದಿ ಸೀನಿಯರ್ ವಿದ್ಯಾರ್ಥಿಗಳು ಐದಾರು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ದೂರಿದ್ದಾರೆ.

ಬಳಿಕ ಆರೋಪಿಯ 12 ವಿದ್ಯಾರ್ಥಿಗಳು ಶಬಾಬ್ ಮತ್ತು ಆತನ ಸ್ನೇಹಿತರು ವಾಸ್ತವ್ಯವಿರುವ ಚಿಲಿಂಬಿಯ ಖಾಸಗಿ ಅಪಾರ್ಟ್‌ಮೆಂಟ್‌ ಗೆ ನುಗ್ಗಿ ಮತ್ತೆ ಆ ವಿದ್ಯಾರ್ಥಿಗಳನ್ನು ವಿಕೆಟ್‌, ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಐದಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ದೂರುದಾರ ವಿದ್ಯಾರ್ಥಿಗಳು ಆರೋಪಿತರ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 12 ಮಂದಿಯಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

 ಬಂಧಿತ ವಿದ್ಯಾರ್ಥಿಗಳು ನಶೆಯಲ್ಲಿದ್ದರೆಂಬ ಆರೋಪವೂ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆಗೂ ಒಳಪಡಿಸಲಾಗಿದೆ. ಹಲ್ಲೆ ಕೃತ್ಯಕ್ಕೆ ಸ್ಪಷ್ಟ ಕಾರಣ ಏನು? ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

2021ರಲ್ಲಿ 6 ರ‍್ಯಾಗಿಂಗ್‌ ಪ್ರಕರಣ ದಾಖಲು: 2021ರಲ್ಲಿ ಕಾಲೇಜುಗಳಲ್ಲಿ ರ‍್ಯಾಗಿಂಗ್‌ಗೆ ಸಂಬಂಧಿಸಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, 40ಕ್ಕೂ ಅಧಿಕ ಮಂದಿಯನ್ನು ದಸ್ತಗಿರಿ ಮಾಡಿಲಾಗಿತ್ತು. ಮತ್ತೆ ಶಾಲಾ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ರ‍್ಯಾಗಿಂಗ್‌ ಹಾಗೂ ಡ್ರಗ್ಸ್ ಹಾವಳಿ ಕುರಿತಂತೆ ಶಾಲಾ ಕಾಲೇಜು ಮುಖ್ಯಸ್ಥರು ನಿಗಾ ವಹಿಸುವಂತೆ ಪೊಲೀಸ್ ಠಾಣೆಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X