ಅಂತಾರಾಷ್ಟ್ರೀಯ ಅಥ್ಲೆಟಿಕ್ ಸ್ಪರ್ಧೆಗೆ ಸುರೇಶ್ ಆಯ್ಕೆ

ಉಡುಪಿ : ಕೇರಳದ ತಿರುವನಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಿಬ್ಬಂದಿ ಸುರೇಶ್ ವೈಯಕ್ತಿಕ ಸ್ಪರ್ಧೆಗಳಲ್ಲಿ ಮೂರು ಬೆಳ್ಳಿಯ ಪದಕ ಪಡೆಯುವ ಮೂಲಕ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ.
ಸುರೇಶ್ ಅವರು ೧೦,೦೦೦ಮೀ. ಓಟದಲ್ಲಿ ಬೆಳ್ಳಿಯ ಪದಕ, ೫,೦೦೦ ಮೀ. ಓಟದಲ್ಲಿ ಬೆಳ್ಳಿಯ ಪದಕ, ೧,೫೦೦ಮೀ. ಓಟದಲ್ಲಿ ಕಂಚಿನ ಪದಕ ಗೆದ್ದುದಲ್ಲದೇ, ೪೦೦ಮೀ. ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ೧೦೦ಮೀ. ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Story