ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಕುಂದಾಪುರ : ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ರಾಬರ್ಟ್ ಬೆರಟ್ಟೋ(೬೨) ಎಂಬವರು ಮೇ ೨೯ರಂದು ರಾತ್ರಿ ಬಚ್ಚಲು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆ ಗೊಂಡ ಸುಬ್ರಾಯ ನಾಯಕ್(೭೦) ಎಂಬವರು ಮೇ ೨೯ರಂದು ಮಧ್ಯಾಹ್ನ ಮನೆಯ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಮನೆಕಟ್ಟಲು ಮಾಡಿರುವ ಸಾಲ ತೀರಿಸಲು ಆಗದೇ ಜೀವನ ದಲ್ಲಿ ಜಿಗುಪ್ಸೆಗೊಂಡ ಕುಂದಾಪುರ ಸರಕಾರಿ ಆಸ್ಪತ್ರೆಯ ನಿವೃತ್ತ ಡಿ ಗ್ರೂಪ್ ನೌಕರ ಲಕ್ಷ್ಮಣ ಎಂಬವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story