ರಾಜ್ಯಸಭೆ ಚುನಾವಣೆ: 3ನೇ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಲೆಹರ್ ಸಿಂಗ್ ಸಿರೋಯಾ
ಬೆಂಗಳೂರು: ಜೂನ್ 10ಕ್ಕೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್ 3ನೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಕಾಂಗ್ರೆಸ್ ಎರಡನೇ ಅಭ್ಯರ್ಥಿ ಕಣಕ್ಕಿಳಿಸಿದ ಬೆನ್ನಲ್ಲೇ ಬಿಜೆಪಿ ಇದೀಗ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೋಯಾ ಅವರಿಗೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ಜೈರಾಮ್ ರಮೇಶ್ ಅವರನ್ನು ಕಣಕ್ಕಿಳಿಸಿದ್ದರೆ. ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರನ್ನು ರವಿವಾರ ಘೋಷಣೆ ಮಾಡಿತ್ತು. ಸೋಮವಾರ ಕಾಂಗ್ರೆಸ್ ನ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್ ನಾಮಪತ್ರ ಸಲ್ಲಿಸಿದ್ದು, ಇದರ ಬೆನ್ನಲ್ಲೇ ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಸಿರೋಯಾ ಅವರನ್ನು ಕಣಕ್ಕಿಳಿಸಿದೆ.

ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಶ್ರೀ ಲೆಹರ್ ಸಿಂಗ್ ಸಿರೋಯಾ ಅವರನ್ನು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.#RajyaSabha pic.twitter.com/XPPSKshDzX
— BJP Karnataka (@BJP4Karnataka) May 30, 2022
Next Story







