ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
ಇನ್ನು ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರು ಕೂಡ ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಗಳೂ ಆಗಿರುವ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಸಚಿವ ಎಚ್.ಡಿ ರೇವಣ್ಣ ಉಪಸ್ಥಿತರಿದ್ದರು.

Next Story







