Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದಲ್ಲಿ ಪ್ರಜಾಪ್ರಭುತ್ವವು...

ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಕೂಡಾ ಒಂದು ಸಾಧನೆಯೇ : ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ31 May 2022 3:10 PM IST
share
ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಕೂಡಾ ಒಂದು ಸಾಧನೆಯೇ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಕೂಡಾ ಒಂದು ಸಾಧನೆಯೇ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ತಿಳಿಸಿದರು. 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಂಟು ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿ ಗಳೊಂದಿಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ವರ್ಚುವಲ್ ವೇದಿಕೆಯ ಮೂಲಕ ಆಯೋಜಿಸಿದ್ದ ಫಲಾನುಭವಿ ಗಳಿಗೆ ನೇರ ಸಂವಾದ ಕಾರ್ಯಕ್ರಮಕ್ಕೆ ಮುನ್ನ, ವಿಧಾನ ಸೌಧದ ಔತಣ ಸಭಾಂಗಣದಲ್ಲಿ ರಾಜ್ಯದ ಫಲಾನುಭವಿ ಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿನ ಪರಿಸ್ಥಿತಿಯನ್ನು ಒಮ್ಮೆ ಅವಲೋಕಿಸಿದಾಗ, ತುರ್ತು ಪರಿಸ್ಥಿತಿಯ ಅವಧಿಯಲ್ಲಿನ ಕರಾಳ ದಿನಗಳ ನಂತರವೂ, ಭಾರತದಲ್ಲಿ ಪ್ರಜಾಪ್ರಭುತ್ವವು ಸದೃಢವಾಗಿದೆ ಎಂಬುದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿದ ಮೊದಲ ವರ್ಷದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ನಿಂತು ಭಾಷಣ ಮಾಡಿದಾಗ ಪ್ರಪ್ರಥಮವಾಗಿ ಸ್ವಚ್ಛ ಭಾರತ ಪರಿಕಲ್ಪನೆಯ ಕುರಿತು ಘೋಷಿಸಿದರು. ಭಾರತವು ಸ್ವಚ್ಛವಾದಾಗ ಜನತೆಯ ಆರೋಗ್ಯವೂ ಸ್ವಚ್ಛವಾಗುತ್ತದೆ. ಜನತೆಯ ಆರೋಗ್ಯ ಉತ್ತಮಗೊಂಡಾಗ ರಾಷ್ಟ್ರವು ಎಲ್ಲಾ ರಂಗಗಳಲ್ಲಿಯೂ ಅಭಿವೃದ್ಧಿ ಮತ್ತು ಪ್ರಗತಿಯತ್ತ ದಾಪುಗಾಲು ಹಾಕುತ್ತದೆ ಎಂಬ ಸದಾಶಯ ಪ್ರಧಾನಿ ಅವರದ್ದಾಗಿದೆ.

ಒಂದು ಕಾಲದಲ್ಲಿ ಸರ್ಕಾರಗಳು ಬಿಡುಗಡೆ ಮಾಡುತ್ತಿದ್ದ ಅನುದಾನವು ಗ್ರೀಸ್ ನಂತೆ ಹೆಪ್ಪುಗಟ್ಟಿ ಕೆಳಹಂತವನ್ನು ತಲುಪುತ್ತಲೇ ಇರಲಿಲ್ಲ ! ಆದರೆ, ಇದೀಗ ಕೇಂದ್ರ ಸರ್ಕಾರವು ಅನುಷ್ಠಾನಕ್ಕೆ ತಂದಿರುವ ನೇರ ಹಣ ವರ್ಗಾವಣಾ  ವ್ಯವಸ್ಥೆಯ ಮೂಲಕ ಬಿಡುಗಡೆ ಆಗುತ್ತಿರುವ ಅನುದಾನವು ಅತ್ಯಂತ ಕ್ಷಿಪ್ರವಾಗಿ ಹಾಗೂ ಪಾರದರ್ಶಕವಾಗಿ ಜೇನಿನ ಹನಿಯಂತೆ ತನ್ನ ಗಮ್ಯಸ್ಥಾನವನ್ನು ತಲುಪುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಈ ಮುನ್ನಾ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪೋಷಣ‍್ ಅಭಿಯಾನ ಯೋಜನೆ, ಮಾತೃ ವಂದನಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ನೇರವಾಗಿ ಸಂವಾದ ನಡೆಸಿ ಮಾಹಿತಿ ಪಡೆದರು. ಅಲ್ಲದೆ, ಈ ಎಲ್ಲಾ ಯೋಜನೆಗಳನ್ನು ರೂವಾರಿ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರ ಗುಣಗಾನ ಮಾಡಿದರು.

ಇದಕ್ಕೂ ಮೊದಲು ಮಾತನಾಡಿದ ವಸತಿ ಸಚಿವ ವಿ. ಸೋಮಣ್ಣ ಅವರು ರಾಜ್ಯದಲ್ಲಿ ಇದೇ ಡಿಸೆಂಬರ್ ಮಾಸಾಂತ್ಯದ ಒಳಗೆ ಎಂಟು ಲಕ್ಷ ಮನೆಗಳನ್ನು ನಿರ್ಮಿಸಿ ಅತ್ಯಂತ ಬಡವರು ಮತ್ತು ಕಡು ಬಡವರಿಗೆ ವಿತರಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ಪ್ರಕಟಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಾಜೋಳ, ಗೃಹ ಸಚಿವ ಅರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಬೆಂಗಳೂರು ಕೇಂದ್ರೀಯ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಅವರೂ ಒಳಗೊಂಡಂತೆ ಹಲವು ಗಣ್ಯರು ಈ ವಿಶೇಷ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿತಗೊಂಡಿರುವ ವಂದಿತಾ ಶರ್ಮ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ ಅವರೂ ಸೇರಿದಂತೆ  ಹಿರಿಯ ಅಧಿಕಾರಿಗಳು  ಈ ಸಮಾರಂಭದಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X