ಜೈಲುಗಳಲ್ಲಿ ಕೈದಿಗಳ ಅಸಹಜ ಸಾವು ಪ್ರಕರಣ: ಅಮಿಕಸ್‍ಕ್ಯೂರಿಯಾಗಿ ವಕೀಲೆ ವಿದ್ಯುಲ್ಲತಾ ನೇಮಕ

ಬೆಂಗಳೂರು, ಮೇ 31: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳ ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸೂಕ್ತ ಸಲಹೆ ಹಾಗೂ ಸಹಕಾರ ನೀಡಲು ವಕೀಲೆ ಬಿ.ವಿ.ವಿದ್ಯುಲ್ಲತಾ ಅವರನ್ನು ಅಮಿಕಸ್‍ಕ್ಯೂರಿಯಾಗಿ ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಸಂಬಂಧಿಕರಿಗೆ ಪರಿಹಾರ ನೀಡುವ ಕುರಿತು ಸುಪ್ರೀಂಕೋರ್ಟ್ 2017ರಲ್ಲಿ ನೀಡಿರುವ ತೀರ್ಪು ಆಧರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿರುವ ಸ್ವಯಂಪ್ರೇರಿತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ವಿದ್ಯುಲ್ಲತಾ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಕ ಮಾಡಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅವರಿಗೆ ಒದಗಿಸಬೇಕು ಎಂದು ರಿಜಿಸ್ಟ್ರಾರ್‍ಗೆ ಸೂಚಿಸಿ ವಿಚಾರಣೆ ಮುಂದೂಡಿತು.
Next Story





