Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ, ದುಬಾರಿ...

"ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ, ದುಬಾರಿ ಫೀಸ್ ಪಾವತಿಸಲಾಗದೆ ವಿದ್ಯಾರ್ಥಿಗಳು ಉಕ್ರೇನ್‍ನಂತ ದೇಶಗಳಿಗೆ ತೆರಳುತ್ತಾರೆ"

ವಾರ್ತಾಭಾರತಿವಾರ್ತಾಭಾರತಿ31 May 2022 6:50 PM IST
share
ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ, ದುಬಾರಿ ಫೀಸ್ ಪಾವತಿಸಲಾಗದೆ ವಿದ್ಯಾರ್ಥಿಗಳು ಉಕ್ರೇನ್‍ನಂತ ದೇಶಗಳಿಗೆ ತೆರಳುತ್ತಾರೆ

ಹೊಸದಿಲ್ಲಿ: "ದೇಶದಲ್ಲಿ ಶಿಕ್ಷಣ ಕ್ಷೇತ್ರ ಒಂದು ದೊಡ್ಡ ಉದ್ಯಮವಾಗಿ ಬಿಟ್ಟಿದೆ.  ವೈದ್ಯಕೀಯ ಕೋರ್ಸುಗಳಿಗೆ ದುಬಾರಿ ಶುಲ್ಕ ಪಾವತಿಸಲು ಸಾಧ್ಯವಾಗದ ವಿದ್ಯಾರ್ಥಿಗಳು ಉಕ್ರೇನ್‍ನಂತಹ ದೇಶಗಳಿಗೆ ತೆರಳುತ್ತಾರೆ" ಎಂದು ಸುಪ್ರೀಂ ಖೋರ್ಟ್ ಇಂದು ಹೇಳಿದೆ.

ದೇಶದಲ್ಲಿ ಹೊಸ ಫಾರ್ಮಸಿ ಕಾಲೇಜುಗಳ ಸ್ಥಾಪನೆಗೆಂದು ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲು ಕೇಂದ್ರಕ್ಕೆ ಸೂಚನೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ದೇಶದಲ್ಲಿ ಫಾರ್ಮಸಿ ಕಾಲೇಜುಗಳು ನಾಯಿಕೊಡೆಗಳಂತೆ ತಲೆಯೆತ್ತುವುದನ್ನು ತಡೆಯಲು  ಹೊಸ ಕಾಲೇಜುಗಳ ಸ್ಥಾಪನೆಗೆ ಐದು ವರ್ಷ ತಡೆಯನ್ನು ಫಾರ್ಮಸಿ ಕೌನ್ಸಿಲ್ 2019ರಲ್ಲಿ ವಿಧಿಸಿತ್ತು. ಈ ನಿರ್ಧಾರವನ್ನು ದಿಲ್ಲಿ, ಕರ್ನಾಟಕ ಮತ್ತು ಛತ್ತೀಸಗಢ ಹೈಕೋರ್ಟ್‍ಗಳು ವಜಾಗೊಳಿಸಿದ್ದರೂ ಕೇಂದ್ರ ಮತ್ತು ಫಾರ್ಮಸಿ ಕೌನ್ಸಿಲ್ ಅದನ್ನು ಬೆಂಬಲಿಸಿದ್ದವು. ತರುವಾಯ ಹೈಕೋರ್ಟ್ ಆದೇಶಗಳ ವಿರುದ್ಧ ಫಾರ್ಮಸಿ ಕೌನ್ಸಿಲ್ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳು ಇನ್ನೂ ಬಾಕಿಯಿವೆ.

"ದೇಶದಲ್ಲಿ 2500ಕ್ಕೂ ಅಧಿಕ ಫಾರ್ಮಸಿ ಕಾಲೇಜುಗಳಿವೆ, ಇಂತಹ ಇನ್ನಷ್ಟು ಕಾಲೇಜುಗಳ ಸ್ಥಾಪನೆಯನ್ನು ತಡೆಯಲು ಐದು ವರ್ಷ ನಿರ್ಬಂಧ ವಿಧಿಸಲಾಗಿತ್ತು. ಇಂಜಿನಿಯರಿಂಗ್ ಕಾಲೇಜುಗಳನ್ನು ಶಾಪಿಂಗ್ ಸೆಂಟರ್‍ಗಳಂತೆ ಹೇಗೆ ನಡೆಸಲಾಗುತ್ತಿತ್ತು ಎಂದು ನ್ಯಾಯಾಲಯಕ್ಕೆ ತಿಳಿದಿದೆ" ಎಂದು ಸರಕಾರ ಮತ್ತು ಫಾರ್ಮಸಿ ಕೌನ್ಸಿಲ್ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.

ಈ ವಾದವನ್ನು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಹಿಮಾ ಕೊಹ್ಲಿ ಅವರ ಪೀಠ ಒಪ್ಪಿದರೂ ಅದೇ ಸಮಯ  ಫಾರ್ಮಸಿ ಕೌನ್ಸಿಲ್‍ನ ಮೇಲ್ಮನವಿ ಅರ್ಜಿಗಳನ್ನು  ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ಬರುವ ತನಕ ಫಾರ್ಮಸಿ ಕಾಲೇಜುಗಳ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಬೇಕೆಂದು ಹೇಳಿ ಫಾರ್ಮಸಿ ಕಾಲೇಜುಗಳ ಮನವಿಗೆ ನ್ಯಾಯಾಲಯ ಪೂರಕವಾಗಿ ಸ್ಪಂದಿಸಿದೆ.

"ಕಾಲೇಜುಗಳ ಆರಂಭಕ್ಕೆ ಅರ್ಜಿಯನ್ನು ಪರಿಗಣಿಸಿ, ಆದರೆ ಅಂತಿಮ ನಿರ್ಧಾರ ಮತ್ತು ಅನುಮೋದನೆ ನೀಡುವಂತಿಲ್ಲ" ಎಂದು ನ್ಯಾಯಾಲಯ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X