Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಕರ್ತ ಮಿಥುನ ಕೊಡೆತ್ತೂರುಗೆ...

ಪತ್ರಕರ್ತ ಮಿಥುನ ಕೊಡೆತ್ತೂರುಗೆ ಪ.ಗೋ.ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ31 May 2022 7:08 PM IST
share

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲ್ಪಡುವ ೨೦೨೧ನೆಯ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿಯನ್ನು ಹೊಸ ದಿಗಂತ ಪತ್ರಿಕೆಯ ವರದಿಗಾರ ಮಿಥುನ ಕೊಡೆತ್ತೂರು ಅವರಿಗೆ ಪ್ರದಾನಿಸಲಾಯಿತು.

ಮಿಥುನ್ ಅವರ ‘ಈಗ ಕೈ ಮಗ್ಗಗಳತ್ತ ಪದವೀಧರರ ಚಿತ್ತ... ಸೀರೆಗಳಲ್ಲಿ ನೇಕಾರರ ಚಿತ್ರ!’ ವರದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿಯು ೧೦,೦೦೧ ರೂ.ನಗದು, ಪ್ರಶಸ್ತಿ ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಮಂಗಳವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಡಿಸಿಪಿ ಹರಿರಾಮ್ ಶಂಕರ್ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಸಮಸ್ಯೆ, ಸವಾಲುಗಳನ್ನು ತಮ್ಮ ಬರಹಗಳ ಮೂಲಕ ಪರಿಚಯಿಸುವುದರೊಂದಿಗೆ ಆಡಳಿತವನ್ನು ಎಚ್ಚರಿಸುವ ಕೆಲಸವನ್ನು ಪತ್ರಕರ್ತರು ಬದ್ಧತೆಯಿಂದ ನಿರ್ವಹಿಸಬೇಕು ಎಂದರು.

ಸಾಧಕ ಪತ್ರಕರ್ತರ ಸ್ಮರಿಸುವ ಕಾರ್ಯವಾಗಲಿ

ಹಿರಿಯ ಪತ್ರಕರ್ತ ಕೆ.ಆನಂದ ಶೆಟ್ಟಿ ಮಾತನಾಡಿ, ಪದ್ಯಾಣ ಗೋಪಾಲಕೃಷ್ಣ ಅವರು ಗ್ರಾಮೀಣ ಭಾಗದ ವರದಿಗಳ ಬಗ್ಗೆ ವಿಶೇಷ ಒಲವು ತೋರುತ್ತಿದ್ದರು. ನೇರ ನುಡಿಯ ಉತ್ತಮ ಪತ್ರಕರ್ತರಾಗಿದ್ದ ಅವರು ಯುವ ಪತ್ರಕರ್ತರಿಗೆ ಮಾದರಿಯಾಗಿದ್ದರು. ಅವರ ಹೆಸರಿನಲ್ಲಿ ಕಳೆದ ೨೩ ವರ್ಷಗಳಿಂದ ಪ.ಗೋ ಪ್ರಶಸ್ತಿ ನೀಡಲಾಗುತ್ತಿದ್ದು, ಇದೊಂದು ಪ್ರತಿಷ್ಠಿತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ದ.ಕ. ಅಪರ ಜಿಲ್ಲಾಘಿಕಾರಿ ಕೃಷ್ಣಮೂರ್ತಿ  ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದ ಮಿಥುನ ಕೊಡೆತ್ತೂರು ಅನಿಸಿಕೆ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪದ್ಯಾಣ ಗೋಪಾಲಕೃಷ್ಣ ಅವರ ಹಿರಿಯ ಪುತ್ರ ವಿಶ್ವೇಶ್ವರ ಪದ್ಯಾಣ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಹಿರಿಯ ಪತ್ರಕರ್ತ ಮುಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X