ರೋಹಿತ್ ಚಕ್ರತೀರ್ಥ ಪ್ರಕರಣ; ಶಿಕ್ಷಣ ಸಚಿವರ ವರದಿಯ ಬಳಿಕ ಮುಂದಿನ ಕ್ರಮ: ಸಿಎಂ ಬೊಮ್ಮಾಯಿ
ದ.ಕ., ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ

ಮಂಗಳೂರು: ರಾಜ್ಯದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಬಂದಿರುವ ಆರೋಪಗಳ ಬಗ್ಗೆ ಶಿಕ್ಷಣ ಸಚಿವರಿಂದ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಮಳಲಿ ಮಸೀದಿಯ ವಿವಾದ ನ್ಯಾಯಾಲಯದ ಮುಂದಿರುವುದರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಬಂದರು ಮೀನುಗಾರಿ ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೋಲಿಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು.





