Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಮಳಲಿ ಮಸೀದಿ ಅರ್ಜಿ ವಿಚಾರಣೆ...

ಮಂಗಳೂರು : ಮಳಲಿ ಮಸೀದಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ31 May 2022 7:49 PM IST
share
ಮಂಗಳೂರು : ಮಳಲಿ ಮಸೀದಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಮಂಗಳೂರು : ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಗೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯ ಎರಡೂ ಕಡೆಯ ವಾದ ವಿವಾದಗಳನ್ನು ಆಲಿಸಿ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಕೆದಿಲಾಯ, ವಿವಾದಿತ‌ ಜಾಗದಲ್ಲಿ ಇರುವ ಹಳೆಯ ಕಟ್ಟಡದಲ್ಲಿ ದೇವಸ್ಥಾನದಂತಹಾ ರಚನೆ ಮತ್ತು ಕೆತ್ತನೆಗಳಿವೆ ಎಂದು ವಾದ ಮಂಡಿಸಿದರು.

ಈ ವೇಳೆ ವಿಹಿಂಪ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಸೀದಿ ಪರ ವಕೀಲರು, ಇದು 700 ವರ್ಷಗಳ ಇತಿಹಾಸ ಇರುವ ಮಸೀದಿ. ಆ‌ ಸಮಯದಲ್ಲಿ ಇಂತಹಾ ವಾಸ್ತುಶಿಲ್ಪಗಳನ್ನೆ ಬಳಸಿಕೊಂಡು ಮಸೀದಿಗಳನ್ನು ಕಟ್ಟಲಾಗಿದೆ. ಇದಕ್ಕೆ ಕಾಸರಗೋಡು, ಮಂಗಳೂರಿನ ಬಂದರ್ ಮಸೀದಿ ಹಾಗೂ ಮಳಲಿ ಪೇಟೆ ಮಸೀದಿಯ ಸಮೀಪದಲ್ಲೇ ಇರುವ ಅಮ್ಮುಂಜೆ ಮಸೀದಿಗಳ ರಚನೆಯೂ ಈ ಮಸೀದಿಯ ರಚನೆಗೆ ಹೋಲಿಕೆಯಾಗುತ್ತಿವೆ‌. ವಿವಾದಿತ ಮಸೀದಿ ಇದ್ದ ಸ್ಥಳದಲ್ಲಿ ದೇವಸ್ಥಾನ ಇತ್ತೆಂದರೆ ಸಾಲದು, ಅದಕ್ಕೆ ಪೂರಕ ಸಾಕ್ಷಿಗಳನ್ನು ಒದಗಿಸಬೇಕೆಂದು ವಾದಿಸಿದರು.

ಮಸೀದಿಗೆ ಸಂಬಂಧಿಸಿದ 91 ಸೆನ್ಟ್ ಜಾಗವಿದೆ.‌ ಇದನ್ನು ಸರಕಾರಿ ಅಧಿಕಾರಿಗಳೇ ಗುರುತಿಸಿದ್ದಾರೆ. ಅಲ್ಲದೆ, ಈ ಮಸೀದಿಯಲ್ಲಿ 500 ವರ್ಷಗಳ ಹಿಂದಿನ ಮುಸ್ಲಿಮರ ಗೋರಿಗಳಿವೆ. ಇದು ಕೇವಲ ರಾಜಕೀಯ ಕಾರಣಕ್ಕಾಗಿ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ. ಅಲ್ಲದೆ,  ಮಾಧ್ಯಮಗಳು  ಮಸೀದಿಯನ್ನು ದೇವಸ್ಥಾನ ಎಂದು  ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿವೆ ಎಂದು ನ್ಯಾಯಾಲಯದ ಗಮನ ಸೆಳೆದರು.

ಈ ಪ್ರಕರಣ ಜ್ಞಾನವ್ಯಾಪಿ ಮಸೀದಿಯ ಪ್ರಕರಣದಂತೆ ಇದೆ. ಆದ್ದರಿಂದ‌ ನ್ಯಾಯಾಲಯ ಪ್ರತ್ಯೇಕ ಆಯೋಗವೊಂದನ್ನು ರಚಿಸಿ ಆ ಮೂಲಕ‌ ಮಸೀದಿಯ ಸಂಪೂರ್ಣ ಸರ್ವೇ ನಡೆಸಬೇಕು. ಒಟ್ಟಾರೆಯಾಗಿ ಈ ಪ್ರಕರಣ ಸತ್ಯಾಸತ್ಯತೆಗಳು ಹೊರ‌ ಬರಬೇಕಿದ್ದರೆ, ವೈಜ್ಞಾನಿಕವಾದ ಸಂಶೋಧನೆಗಳನ್ನೊಳಗೊಂಡ‌‌ ವರದಿಯ ಅಗತ್ಯವಿದೆ ಎಂದು ವಿಶ್ವ ಹಿಂದೂ ಪರಿಷತ್ ಪರ ವಕೀಲರು ವಾದದ ಸಂದರ್ಭ ರಾಮ‌ ಜನ್ಮ ಭೂಮಿ ಪ್ರಕರಣವನ್ನು ಪ್ರಸ್ತಾಪಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಸೀದಿಯ ಪರ ವಕೀಲರು, ರಾಮಜನ್ಮ ಭೂಮಿಗೂ ಮಳಲಿ ಮಸೀದಿಯ ವಿವಾದಕ್ಕೂ ಅಜಗಜಾಂತರ ವ್ಯತ್ಯಾಸವಿದೆ.‌ ಅದು ರಾಮನ ಜನ್ಮ ಭೂಮಿ ಎಂಬ ಕಾರಣಕ್ಕೆ ಬೇಡಿಕೆ ಇಡಲಾಗಿತ್ತು. ಆದರೆ, ಇಲ್ಲಿ 1991 ಜಾರಿಗೆ ತರಲಾಗಿರುವ ಕಾನೂನಿನ ಪ್ರಕಾರ  ಸ್ವಾತಂತ್ರ್ಯದ‌ ಸಂದರ್ಭ ಇದ್ದ ಧಾರ್ಮಿಕ ಸ್ಥಳಗಳಲ್ಲಿ ಯಥಾ ಸ್ಥಿತಿ ಕಾಪಾಡಬೇಕೆಂದಿದೆ‌. ಅದರಂತೆ ಮಳಲಿ‌ ಮಸೀದಿಗೂ ಈ ಕಾನೂನು ಅನ್ವಯವಾಗುತ್ತದೆ‌‌‌ ಎಂದು ವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X